ಬುಧವಾರ, ಜನವರಿ 29, 2020
26 °C

ಭಾರತವನ್ನು ಹಿಂದೂ ರಾಷ್ಟ್ರ ಮಾಡಬಾರದೇಕೆ?: ಸುರೇಶ ಅಂಗಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಭಾರತವನ್ನು ಹಿಂದೂ ರಾಷ್ಟ್ರ ಮಾಡಬಾರದೇಕೆ? ಬೇರೆ ಧರ್ಮೀಯರಿಗೆ ಒಂದೊಂದು ರಾಷ್ಟ್ರ ಇದೆಯಲ್ಲವೇ, ನಮಗೂ ಒಂದು ದೇಶ ಬೇಕೋ, ಬೇಡವೋ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಕೇಳಿದರು.

ತಾಲ್ಲೂಕಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾವು ಹಿಂದೂ ರಾಷ್ಟ್ರ ಮಾಡುತ್ತಿಲ್ಲ. ಇಲ್ಲಿ ಎಲ್ಲರೂ ಬದುಕಬೇಕು. ಹಿಂದೂ ಎನ್ನುವುದು ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಹಳೆಯ ಜಾತಿ ಪ್ರಮಾಣಪತ್ರಗಳನ್ನು ತೆಗೆದು ನೋಡಿ. ಅದರಲ್ಲಿ ಹಿಂದೂ ಮುಸ್ಲಿಂ, ಹಿಂದೂ ಕ್ರೈಸ್ತ ಎಂದು ನಮೂದಿಸಲಾಗಿದೆ. ಇದನ್ನು ಅರಿಯದೇ ವಿರೋಧಪಕ್ಷದವರು ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ’ ಎಂದರು.

‘ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದ್ದೇನೆ. ನಾನು ಯಾರನ್ನೂ‌ ಪ್ರಚೋದಿಸುತ್ತಿಲ್ಲ. ಕಾಂಗ್ರೆಸ್‌ನವರು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ತಿರುಗೇಟು ನೀಡಿದರು. ದೇಶದ 130 ಕೋಟಿ ಜನರೂ ಸುರಕ್ಷಿತವಾಗಿದ್ದಾರೆ. ಅಫ್ಘಾನಿಸ್ತಾನ, ಬಾಂಗ್ಲಾ ದೇಶ, ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತ ಸಿಖ್, ಹಿಂದೂ, ಪಾರ್ಸಿ, ಜೈನರ ಸಲುವಾಗಿ ಕಾನೂನು ಮಾಡಿದ್ದೇವೆ. ಅವರು ಗೌರವದಿಂದ ಇರಬೇಕೋ ಬೇಡವೋ? ಆ ಮೂರು ರಾಷ್ಟ್ರಗಳೂ ಇಸ್ಲಾಂ ರಾಷ್ಟ್ರವೆಂದು ಘೋಷಿಸಿಕೊಂಡಿವೆ. ಅಲ್ಲಿರುವರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ’ ಎಂದು ದೂರಿದರು.

‘ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಶೀಘ್ರವೇ ಸಿಹಿ ಸುದ್ದಿ ಕೊಡಲಿದ್ದೇವೆ’ ಎಂದು ಪ್ರತಿಕ್ರಿಯಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು