ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದಕ್ಷರ ಬದಲಾವಣೆ ಇಲ್ಲದೇ ಮೈತ್ರಿ ಸರ್ಕಾರದ ಹಣಕಾಸು ವಿಧೇಯಕ ಮಂಡನೆ: ಬಿಎಸ್‌ವೈ

Last Updated 28 ಜುಲೈ 2019, 6:43 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರ ರೂಪಿಸಿರುವ ಹಣಕಾಸು ವಿಧೇಯಕವನ್ನು ಒಂದಕ್ಷರವೂ ಬದಲಾವಣೆ ಮಾಡದೇ ಸೋಮವಾರ ಮಂಡಿಸಿ, ಅಂಗೀಕರ ಪಡೆಯಲಾಗುವುದುಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಭಾನುವಾರ ಘೋಷಿಸಿದ್ದಾರೆ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ತಮ್ಮ ನಿವಾಸ ‘ದವಳಗಿರಿ’ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ‘ಮೈತ್ರಿ ಸರ್ಕಾರದ ಹಣಕಾಸು ವಿಧೇಯಕವನ್ನು ಯಾವುದೇ ಬದಲಾವಣೆ ಇಲ್ಲದೇ ವಿಧಾನಸಭೆಯಲ್ಲಿ ಸೋಮವಾರ ಮಂಡಿಸುತ್ತೇವೆ. ಈ ಕುರಿತು ಈಗಾಗಲೇ ಸ್ಪೀಕರ್‌ಗೆ ತಿಳಿಸಿದ್ದೇವೆ,’ ಎಂದು ಅವರು ತಿಳಿಸಿದರು.

ಮೈತ್ರಿ ಸರ್ಕಾರದ ಹಣಕಾಸು ವಿಧೇಯಕವನ್ನೇ ಅಂಗೀಕರಿಸುವಂತೆಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ವಿಶ್ವಾಸ ಮತ ಯಾಚನೆ ವೇಳೆ ಸದನದಲ್ಲಿ ಮನವಿ ಮಾಡಿದ್ದರು. ನಂತರ ವಿಶ್ವಾಸ ಮತ ಸೋತಿದ್ದ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಹಣಕಾಸು ವಿಧೇಯಕ ಅಂಗೀಕಾರಗೊಳ್ಳುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು.ಅದರೆ, ಮೈತ್ರಿ ಸರ್ಕಾರವೇ ರೂಪಿಸಿದ್ದ ಹಣಕಾಸು ವಿಧೇಯಕವನ್ನೇ ಅಂಗೀಕರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧರಿಸಿದ್ದರು ಎನ್ನಲಾಗಿತ್ತು. ಅದರಂತೆ ಇಂದು ಈ ವಿಷಯವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT