7

ಸಮ್ಮಿಶ್ರ ಸರ್ಕಾರ 5 ವರ್ಷ ಪೂರ್ಣಗೊಳಿಸುತ್ತದೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

Published:
Updated:

ಚಿತ್ರದುರ್ಗ: ಕಾಂಗ್ರೆಸ್‌–ಜೆಡಿಎಸ್‌ ರಾಜ್ಯ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸುತ್ತದೆ. ಕೆಪಿಸಿಸಿ ಅಧ್ಯಕ್ಷನಾಗಿ ಈ ಮಾತು ಹೇಳುತ್ತಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದರು.
ತುಮಕೂರಿನಿಂದ ಕೊಪ್ಪಳಕ್ಕೆ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಅವರು ಚಿತ್ರದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. 

ಸಮ್ಮಿಶ್ರ ಸರ್ಕಾರ ಅವಧಿ ಪೂರ್ಣಗೊಳಿಸುವುದು ಅನುಮಾನ ಎಂಬ ಸಿದ್ದರಾಮಯ್ಯ ಅವರ ಮಾತಿನ ಕುರಿತು ಕೇಳಿದ ಪ್ರಶ್ನೆಗೆ ತುಸು ಸಿಡುಕಿನಿಂದಲೇ ಉತ್ತರಿಸಿದರು. 
‘ಸಮ್ಮಿಶ್ರ ಸರ್ಕಾರ ರಚಿಸುವ ಸಂದರ್ಭದಲ್ಲಿ ಕಾಂಗ್ರೆಸ್‌–ಜೆಡಿಎಸ್‌ ಒಪ್ಪಂದ ಮಾಡಿಕೊಂಡಿವೆ. ಅದರಂತೆ ಐದು ವರ್ಷಗಳ ವರೆಗೂ ಸಮ್ಮಿಶ್ರ ಸರ್ಕಾರ ಇರುತ್ತೆ. ಒಂದೇ ಪ್ರಶ್ನೆಯನ್ನು ಎಷ್ಟು ಬಾರಿ ಕೇಳಿದರೂ ನನ್ನ ಉತ್ತರ ಇದೇ’ ಎಂದರು.
‘ರಾಜಕಾರಣದಲ್ಲಿ ಯಾವ ಸಂದರ್ಭದಲ್ಲಿ ಏನಾಗುತ್ತದೆ ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ನೇಮಕಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.

 

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !