‘ಗೋಕಾಕ್‌ ಮಾದರಿ ಹೋರಾಟದ ಎಚ್ಚರಿಕೆ’

7
ಸರ್ಕಾರಿ ಶಾಲೆಗಳ ವಿಲೀನ: ಸಾಹಿತಿಗಳ ಎಚ್ಚರಿಕೆ

‘ಗೋಕಾಕ್‌ ಮಾದರಿ ಹೋರಾಟದ ಎಚ್ಚರಿಕೆ’

Published:
Updated:

ಬೆಂಗಳೂರು: ‘ಸರ್ಕಾರಿ ಶಾಲೆಗಳ ವಿಲೀನ ಹಾಗೂ ಇಂಗ್ಲಿಷ್‌ ಮಾಧ್ಯಮದ ತರಗತಿಗಳ ಆರಂಭಿಸುವ ಪ್ರಸ್ತಾವವನ್ನು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕೈಬಿಡದಿದ್ದರೆ ಗೋಕಾಕ್‌ ಮಾದರಿಯ ಹೋರಾಟ ನಡೆಸುತ್ತೇವೆ’ ಎಂದು ಸಾಹಿತಿಗಳು ಹಾಗೂ ಹೋರಾಟಗಾರರು ಎಚ್ಚರಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ, ಸಾಹಿತಿಗಳಾದ ಚಂದ್ರಶೇಖರ ಪಾಟೀಲ, ಸಿದ್ಧಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ, ಚಿಂತಕ ಎಂ. ಚಿದಾನಂದಮೂರ್ತಿ, ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ಸೇರಿದಂತೆ ಹೋರಾಟಗಾರರು ಶನಿವಾರ ಸಭೆ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿದರು.

‘ಬಜೆಟ್‌ ಪ್ರಸ್ತಾವ ಕನ್ನಡ ವಿರೋಧಿ. ಇದರಿಂದ ಪ್ರಾಥಮಿಕ ಹಂತದಲ್ಲೇ ಕನ್ನಡ ಉಳಿವಿಗೆ ಕುತ್ತು ಉಂಟಾಗಲಿದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಜಿ.ಸಿದ್ಧರಾಮಯ್ಯ ಎಚ್ಚರಿಸಿದರು.

ಬಳಿಕ ಸಿದ್ಧರಾಮಯ್ಯ ಹಾಗೂ ಮನು ಬಳಿಗಾರ ನೇತೃತ್ವದ ನಿಯೋಗವು ಕುಮಾರಸ್ವಾಮಿ ಅವರನ್ನು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.

‘ಕನ್ನಡ ಭಾಷೆಗೆ ಮಾರಕವಾಗುವ ತೀರ್ಮಾನವನ್ನು ಕೈಗೊಳ್ಳುವುದಿಲ್ಲ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ನಿಯೋಗಕ್ಕೆ ಅಭಯ ನೀಡಿದರು.

****

ಗ್ರಾಮೀಣ ಮಕ್ಕಳ ಅನುಕೂಲಕ್ಕೆ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಕಲಿಸಲು ನಿರ್ಧರಿಸಲಾಗಿದ್ದು ಇದರಿಂದ ಕನ್ನಡಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ
-ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !