ಶನಿವಾರ, ಜುಲೈ 31, 2021
28 °C

ಮಾಸ್ಕ್‌ ಧರಿಸದ ಪ್ರತಾಪ ಸಿಂಹ: ವಿಧಾನಸೌಧಕ್ಕೆ ಸಿಗದ ಪ್ರವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರು ಸಂಸದ ಪ್ರತಾಪ ಸಿಂಹ ಮಾಸ್ಕ್‌ ಧರಿಸದೇ ಬಂದ ಕಾರಣ ಗುರುವಾರ ವಿಧಾನಸೌಧದ ಪ್ರವೇಶಕ್ಕೆ ಅವಕಾಶ ನೀಡಲಿಲ್ಲ.

ವಿಧಾನಸೌಧ ಪ್ರವೇಶಕ್ಕೆ ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ. ಎಲ್ಲ ಪ್ರವೇಶ ದ್ವಾರಗಳಲ್ಲಿ ಥರ್ಮಲ್‌ ಸ್ಕ್ಯಾನಿಂಗ್‌ ಮೂಲಕ ದೇಹದ ಉಷ್ಣಾಂಶವನ್ನು ಪರೀಕ್ಷಿಸಿ, ಕೈಗೆ ಸ್ಯಾನಿಟೈಸರ್ ಹಾಕಲಾಗುತ್ತದೆ. ಆದರೆ, ಪ್ರತಾಪ ಸಿಂಹ ಅಲ್ಲಿಗೆ ಬಂದಾಗ ಮಾಸ್ಕ್‌ ಧರಿಸಿರಲ್ಲಿಲ್ಲ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬ್ಬಂದಿ ಮತ್ತೆ ಹೋಗಿ ಧರಿಸಿಕೊಂಡು ಬರುವಂತೆ ಸೂಚಿಸಿದರು. ಬಳಿಕ ಅವರು ಹಿಂದಕ್ಕೆ ಹೋದರು ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ವಿಕಾಸಸೌಧ ಮತ್ತು ಕೃಷ್ಣಾಗೂ ಕೊರೊನಾ ವೈರಸ್‌ ಕಾಲಿಟ್ಟ ಬೆನ್ನಲ್ಲೇ ವಿಧಾನಸೌಧದಲ್ಲಿ ಕಟ್ಟು ನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು