ಮಂಗಳವಾರ, ಮಾರ್ಚ್ 9, 2021
29 °C

ಬೆಂಕಿ ಹಚ್ಚಿ ಕೊಲೆ; ಅಪರಾಧಿಗೆ ಜೀವಾವಧಿ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿಯ ವಿಟ್ಟಸಂದ್ರ ಗ್ರಾಮದಲ್ಲಿ ಸವಿತಾ ಎಂಬುವರ ಮೈ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಅಪರಾಧಿ ಸೋಮಶೇಖರ್ ಅಲಿಯಾಸ್ ಅಪ್ಪಿ ಎಂಬಾತನಿಗೆ ಜೀವಾವಧಿ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಲಾಗಿದೆ.

2014ರಲ್ಲಿ ನಡೆದಿದ್ದ ಪ್ರಕರಣದ ವಿಚಾರಣೆ ನಡೆಸಿದ 9ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜೆ.ವಿ.ವಿಜಯಾನಂದ, ಈ ಆದೇಶ ಹೊರಡಿಸಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್ ಅಲುಮೇಲು ವಾದಿಸಿದ್ದರು.

‘ಆನೇಕಲ್ ತಾಲ್ಲೂಕಿನ ರಾಯಸಂದ್ರ ಗ್ರಾಮದ ಸೋಮಶೇಖರ್, ವಿವಾಹಿತೆಯಾಗಿದ್ದ ಸುನೀತಾ ಜತೆಯಲ್ಲಿ ಅನೈತಿಕ ಸಂಬಂಧವಿಟ್ಟುಕೊಂಡಿದ್ದ. ಆ ವಿಷಯ ಎರಡೂ ಕುಟುಂಬದವರಿಗೂ ಗೊತ್ತಾಗಿತ್ತು. ಅದೇ ಕಾರಣಕ್ಕೆ ಆರೋಪಿ, ಅವರನ್ನು ಕೊಲೆ ಮಾಡಿದ್ದ’ ಎಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.