ಡಾ.ಶಶಿಧರ್‌ಗೆ ಡಾ.ಬಿ.ಸಿ.ರಾಯ್ ಪ್ರಶಸ್ತಿ

7

ಡಾ.ಶಶಿಧರ್‌ಗೆ ಡಾ.ಬಿ.ಸಿ.ರಾಯ್ ಪ್ರಶಸ್ತಿ

Published:
Updated:

ಗೌರೀಬಿದನೂರು: ನಗರದ ಮಾನಸ ಆಸ್ಪತ್ರೆ ಸಮೂಹದ ಮುಖ್ಯಸ್ಥ ಡಾ.ಎಚ್.ಎಸ್.ಶಶಿಧರ್ ಅವರನ್ನು 2017-18ನೇ ಸಾಲಿನ ವೈದ್ಯಕೀಯ ರಂಗದ ಪ್ರತಿಷ್ಠಿತ ಡಾ.ಬಿ.ಸಿ.ರಾಯ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿಶ್ವ ವೈದ್ಯರ ದಿನಾಚರಣೆ ಅಂಗವಾಗಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಜುಲೈ 14ರಂದು ಶಶಿಧರ್ ಅವರಿಗೆ ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದ ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಅವರು ಸಲ್ಲಿಸಿರುವ ವೈದ್ಯಕೀಯ ಸೇವೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಾನಸ ಆಸ್ಪತ್ರೆ ಸಮೂಹದಿಂದ ನಡೆಸಲಾದ ಶಿಬಿರಗಳಲ್ಲಿ 50 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಉಚಿತವಾಗಿ ನೇತ್ರ ಚಿಕಿತ್ಸೆ ಮಾಡಿದ್ದಾರೆ. ವೃದ್ಧಾಶ್ರಮದ ಮೂಲಕ ಹಿರಿಯ ಚೇತನಗಳಿಗೆ ಆಸರೆಯಾಗಿದ್ದಾರೆ. ಪರಿಸರ ರಕ್ಷಣೆಗಾಗಿ 1 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡುವ ಯೋಜನೆ ಕೈಗೊಂಡಿದ್ದಾರೆ.

ಗಡಿಭಾಗದಲ್ಲಿ ಕನ್ನಡ ನಾಡು, ನುಡಿ ಅಭಿವೃದ್ದಿಗಾಗಿ ಸಂಘಟನೆಗಳೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತಿದ್ದಾರೆ. ಇವೆಲ್ಲವನ್ನೂ  ಪ್ರಶಸ್ತಿಗೆ ಪರಿಗಣಿಸಲಾಗಿದೆ ಎಂದು ಕರ್ನಾಟಕ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !