ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಆರ್ಥಿಕ ವೇದಿಕೆ | ಬಂಡವಾಳ ಹೂಡಿಕೆದಾರರಿಗೆ ಸಮಾನ ಅವಕಾಶ: ಯಡಿಯೂರಪ್ಪ

Last Updated 20 ಜನವರಿ 2020, 16:03 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದಲ್ಲಿ ಸೆಂಟರ್‌ ಫಾರ್ ಇಂಟರ್‌ನೆಟ್ ಆಫ್ ಎಥಿಕಲ್ ಥಿಂಗ್ಸ್‌ ಆರಂಭಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯೂಇಎಫ್‌) ಸಮ್ಮೇಳನದಲ್ಲಿ ಕರ್ನಾಟಕದ ಪ್ರದರ್ಶನ ಕೇಂದ್ರ ಉದ್ಘಾಟನೆ ವೇಳೆ ಮಾತನಾಡಿದ ಅವರು, ಈ ಕೇಂದ್ರ ಆರಂಭಿಸುವ ಮೂಲಕ ರಾಜ್ಯವು ಬಂಡವಾಳ ಹೂಡಿಕೆದಾರರಿಗೆ ಸಮಾನ ಅವಕಾಶ ಕಲ್ಪಿಸಲಿದೆ ಎಂದರು.

ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಜರಿದ್ದಡಬ್ಲ್ಯೂಇಎಫ್‌ನ ಮೊರಾಟ್ ಸಾನ್‌ಮೆಝ್‌, ‘ವಹಿವಾಟು ಕ್ಷೇತ್ರದಲ್ಲಿ ನೈತಿಕತೆ ಕಡಿಮೆಯಾಗುತ್ತಿರುವ ಬಗ್ಗೆ ಹೂಡಿಕೆದಾರರು ಕಳವಳ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಗಳು ಸೆಂಟರ್ ಫಾರ್ ಇಂಟರ್ನೆಟ್ ಆಫ್ ಎಥಿಕಲ್ ಥಿಂಗ್ಸ್ ಅನ್ನು ಪ್ರಾರಂಭಿಸುವ ಅಗತ್ಯವಿದೆ. ಕೃತಕ ಬುದ್ಧಿಮತ್ತೆಯ ದುರುಪಯೋಗ ತಡೆಯಲು ಈ ಕೇಂದ್ರ ಸಹಕಾರಿ. ಕರ್ನಾಟಕವು ಹೆಚ್ಚಿನ ಹೂಡಿಕೆ ನಿರೀಕ್ಷಿಸುವುದಾದರೆ, ಈ ಕೇಂದ್ರವನ್ನು ಕೂಡಲೇ ಸ್ಥಾಪಿಸುವಂತೆ ಸಲಹೆ ನೀಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಯಡಿಯೂರಪ್ಪ ಈ ಕೇಂದ್ರ ಸ್ಥಾಪಿಸುವ ಭರವಸೆ ನೀಡಿದರು.

ಅಭಿವೃದ್ಧಿಯ ಕಾರ್ಯಸೂಚಿಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಜಾಗತಿಕ ಮಟ್ಟದಲ್ಲಿ ಮುಂಚೂಣಿ ರಾಜ್ಯವನ್ನಾಗಿ ರೂಪಿಸಲು ಬೇಕಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳಲು ಆಸಕ್ತಿ ವಹಿಸಿದೆ ಎಂದು ಅವರು ತಿಳಿಸಿದರು.

ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಭಾರತ ಮತ್ತು ಏಷ್ಯಾ ಕಾರ್ಯಸೂಚಿಯ ಪ್ರಾದೇಶಿಕ ಮುಖ್ಯಸ್ಥ ವಿರಾಜ್ ಮೆಹ್ತಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT