ಬುಧವಾರ, ಜುಲೈ 28, 2021
28 °C

ಹುಬ್ಬಳ್ಳಿಯಲ್ಲಿ ವಿಶ್ವದ ಉದ್ದನೆಯ ರೈಲ್ವೆ ಪ್ಲಾಟ್‌ಫಾರ್ಮ್‌ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದಲ್ಲಿ ವಿಶ್ವದಲ್ಲೇ ಅತಿ ಉದ್ದದ ಪ್ಲಾಟ್‌ ಫಾರ್ಮ್‌ ನಿರ್ಮಾಣವಾಗಲಿದೆ.

ಈಗಿರುವ ಒಂದನೇ ಪ್ಲಾಟ್‌ ಫಾರ್ಮ್‌ 550 ಮೀಟರ್‌ ಉದ್ದವಿದ್ದು, ಅದನ್ನು 1,400 ಮೀ.ಗೆ ಹೆಚ್ಚಿಸಲಾಗುತ್ತಿದೆ. ಈಗಿನ ತಪಾಸಣಾ ಕ್ಯಾರೇಜ್‌ ಮಾರ್ಗವನ್ನು ಪೂರ್ಣ ಪ್ಲಾಟ್‌ಫಾರ್ಮ್‌ ಆಗಿ ಪರಿವರ್ತಿಸಲಾಗುವುದು. ಒಟ್ಟು ₹90 ಕೋಟಿ ವೆಚ್ಚದಲ್ಲಿ ಕೆಲಸ ಆರಂಭಿಸಲಾಗಿದ್ದು, 2021ರ ಜೂನ್‌ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ 1,366 ಮೀ. ಉದ್ದದ ಪ್ಲಾಟ್‌ಫಾರ್ಮ್‌ ಇದ್ದು, ಇದು ಸದ್ಯಕ್ಕೆ ವಿಶ್ವದ ಅತಿ ಉದ್ದದ ಪ್ಲಾಟ್‌ಫಾರ್ಮ್‌ ಎನ್ನುವ ಹೆಗ್ಗಳಿಕೆ ಹೊಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು