ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಶವ ಎಳೆದೊಯ್ದು ಗುಂಡಿಗೆ ಎಸೆದ ಸಿಬ್ಬಂದಿ

Last Updated 1 ಜುಲೈ 2020, 17:40 IST
ಅಕ್ಷರ ಗಾತ್ರ

ಯಾದಗಿರಿ: ಕೋವಿಡ್‌ ಸೋಂಕಿನಿಂದ ಮೃತಪಟ್ಟತಾಲ್ಲೂಕಿನ ಹೊನಗೇರಾ ಗ್ರಾಮದ 45 ವರ್ಷದ ವ್ಯಕ್ತಿಯ ಶವವನ್ನು ಆಂಬುಲೆನ್ಸ್‌ನಿಂದಇಳಿಸಿದ ಆರೋಗ್ಯ ಇಲಾಖೆಯ ಸಿಬ್ಬಂದಿ, ಕಟ್ಟಿಗೆ ಕಟ್ಟಿ ಎಳೆದೊಯ್ದು ಗುಂಡಿಗೆ ಎಸೆದಿದ್ದಾರೆ.

ಮೊಬೈಲ್‌ನಲ್ಲಿ ಸೆರೆಯಾಗಿರುವ ಈ ದೃಶ್ಯ ಸಾಮಾಜಿಕ ತಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮೃತ ವ್ಯಕ್ತಿ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಭಾನುವಾರ ಮಗಳ ಮದುವೆ ಮಾಡಿದ್ದರು. ಮರುದಿನ ಸೋಮವಾರ ಉಸಿರಾಟದ ತೊಂದರೆಯಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದರು. ಈ ವೇಳೆ ಗಂಟಲು ದ್ರವ ತೆಗೆದುಕೊಂಡು ಪರೀಕ್ಷೆ ಮಾಡಿದಾಗ ಕೋವಿಡ್‌–19 ಸೋಂಕು ಇರುವುದು ಧೃಡಪಟ್ಟಿದೆ.

ವಿಡಿಯೊದಲ್ಲಿ ಏನಿದೆ?:

ಶವವನ್ನು ಆಂಬುಲೆನ್ಸ್‌ನಿಂದಕೆಳಗಿಳಿಸಿದ ನಂತರ ಒಂದು ಕಟ್ಟೆಗೆಗೆ ಕಟ್ಟಿ ಜಮೀನಲ್ಲಿ ತೋಡಿದ್ದ ಗುಂಡಿಯತ್ತ ಎಳೆದೊಯ್ದು, ಗುಂಡಿಯಲ್ಲಿ ಹಾಕುತ್ತಾರೆ. ನಂತರ ಜೆಸಿಬಿ ಮೂಲಕ ಮಣ್ಣು ಮುಚ್ಚುವ ದೃಶ್ಯವಿಡಿಯೊದಲ್ಲಿದೆ.

‘ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಕೆಲಕಾಲ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಶವ ಇರಿಸಲಾಗಿತ್ತು. ಮೃತನ ಸಹೋದರ ತಮ್ಮ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುತ್ತೇನೆ ಎಂದು ಹೇಳಿದ ನಂತರ ಆರೋಗ್ಯ ಇಲಾಖೆ ಸಿಬ್ಬಂದಿ ಆಂಬುಲೆನ್ಸ್‌ನಲ್ಲಿ ಅಲ್ಲಿಗೆ ಶವ ಸಾಗಿಸಿದರು’ ಎಂದು ಮೂಲಗಳು ತಿಳಿಸಿವೆ.

ಆರೋಗ್ಯ ಇಲಾಖೆಯಿಂದ ಮಾಹಿತಿ ತರಿಸಿಕೊಳ್ಳುವುದಾಗಿಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT