ಶನಿವಾರ, ಡಿಸೆಂಬರ್ 7, 2019
22 °C

ಯಡಿಯೂರಪ್ಪ ಕಾಲುಗುಣದ ಬಗ್ಗೆ ಸಿದ್ದರಾಮಯ್ಯ ಟ್ವೀಟ್‌ಗೆ ಈಶ್ವರಪ್ಪ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕಾಲುಗುಣದ ಬಗ್ಗೆ ಟ್ವೀಟ್‌ ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಚಿವ ಕೆ.ಎಸ್‌. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕಾಲ್ಗುಣದಂತಹ ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ. ಆದರೆ 2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು. ನಮ್ಮ ಕಾಲದಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿದಾಗ ನಮ್ಮ ಸರ್ಕಾರ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತ ಯೋಜನೆಗಳ ಮೂಲಕ ನೆರವಾಗಿ ಆತ್ಮಹತ್ಯೆಯ ಸರಣಿಯನ್ನು ತಡೆದಿದ್ದೆವು ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ: ಚಂದ್ರಯಾನ–2: ಮೋದಿ ಕಾಲ್ಗುಣದಿಂದಲೇ ಇಸ್ರೊಗೆ ಅಪಶಕುನ – ಕುಮಾರಸ್ವಾಮಿ

ಇದಕ್ಕೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, ಸಿದ್ದರಾಮಯ್ಯ ಕಾಲುಗುಣದಿಂದ ಕಾಂಗ್ರೆಸ್ ನಿರ್ನಾಮವಾಗಿದೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಾಗ ಅವರ ಕಾಲುಗುಣದ ಬಗ್ಗೆ ಅವರೇ ತಿಳಿದುಕೊಳ್ಳಲಿ ಆದರೆ ಅವರು ಯಡಿಯೂರಪ್ಪ ಬಗ್ಗೆ ಮಾತಾನಾಡುವ ಅಗತ್ಯ ಇಲ್ಲ ಎಂದು ಟೀಕಿಸಿದ್ದಾರೆ. 

ಗೋಸುಂಬೆ ರಾಜಕಾರಣ ಮಾಡುವುದು ಸಿದ್ದರಾಮಯ್ಯ ಅವರು ಆಗಾಗಿ ಅವರಿಗೆ ಕಾಂಗ್ರೆಸ್‌ನಲ್ಲಿ ಭವಿಷ್ಯ ಇಲ್ಲ ಎಂದರು. ಸಿದ್ದರಾಮಯ್ಯ ಅಧಿಕಾರ ಸಿಕ್ಕಾಗ ಹೇಡಿತನ ಬಿಟ್ಟು ಏನ್ ಮಾಡಿದ್ದಾರೆ? ಹಿಂದುಳಿದವರು ,ಅಲ್ಪಸಂಖ್ಯಾತರಿಗೆ ಅನುಕೂಲ ಮಾಡಿಕೊಟ್ಡಿಲ್ಲ ಎಂದು ಕಿಡಿಕಾರಿದರು. 

ಇಡೀ ದೇಶ ಮೆಚ್ಚುವ ಪ್ರಧಾನಿ ಮೋದಿಯನ್ನು ಪ್ರಪಂಚ ಮೆಚ್ಚಿದೆ, ಸಿದ್ದರಾಮಯ್ಯ ಲೆಕ್ಕಕ್ಕೆ ಇಲ್ಲ, ಅವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಈಶ್ವರಪ್ಪ ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು