ಸೋಮವಾರ, ಜುಲೈ 4, 2022
21 °C
ಮಾಧ್ಯಮಗಳಲ್ಲಿ ಮಾತ್ರ ಮೋದಿ ಅಲೆ: ಫೈಲ್ ಕಾಪಾಡದವರು ಚೌಕಿದಾರ್ ಹೇಗಾಗುತ್ತಾರೆ

ಬಿಎಸ್‌ವೈ ಮಾತು ನಡೆಯುತ್ತಿಲ್ಲ: ಸಿ.ಎಂ. ಇಬ್ರಾಹಿಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಬಿಜೆಪಿಯಲ್ಲಿ ಬಿ.ಎಲ್. ಸಂತೋಷ್ ಅವರು ಮಾತಿಗೆ ಮನ್ನಣೆ ಸಿಗುತ್ತಿದ್ದು, ಬಿ.ಎಸ್. ಯಡಿಯೂರಪ್ಪ ಅವರ ಮಾತು ನಡೆಯುತ್ತಿಲ್ಲ. ದಿ. ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರಿಗೆ ಟಿಕೆಟ್ ತಪ್ಪಿದಾಗಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕಿತ್ತು ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಕಿಚಾಯಿಸಿದರು.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಒಂದೂ ಟಿಕೆಟ್ ನೀಡದಿದ್ದರೂ ಪರವಾಗಿಲ್ಲ, ಎಲ್ಲರೂ ಸೇರಿ ನರೇಂದ್ರ ಮೋದಿ ಅವರನ್ನು ಸೋಲಿಸಬೇಕಾಗಿದೆ ಎಂದು ಹೇಳಿದ್ದೇವೆ. ಕಚೇರಿಯ ಕಡತ ಕಾಪಾಡಲು ಆಗದವರು ಚೌಕೀದಾರ್ ಹೇಗಾಗುತ್ತಾರೆ? ದೇಶದಲ್ಲಿ ಮೋದಿ ವಿರುದ್ಧ ಅಲೆ ಇದೆ. ಆದರೆ, ಮಾಧ್ಯಮಗಳಲ್ಲಿ ಮಾತ್ರ ಮೋದಿ ಪರ ಅಲೆ ಇದೆ ಎಂದರು.

ಧಾರವಾಡ ಕ್ಷೇತ್ರದ ಅಭ್ಯರ್ಥಿ ಘೋಷಣೆ ಸ್ವಲ್ಪ ವಿಳಂಬವಾಗಿದ್ದು, ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು