ಎತ್ತಿನಹೊಳೆ, ಯಗಚಿ ಶೀಘ್ರ ಪರಿಹಾರಕ್ಕೆ ಸಿ.ಎಂ ಸೂಚನೆ

7

ಎತ್ತಿನಹೊಳೆ, ಯಗಚಿ ಶೀಘ್ರ ಪರಿಹಾರಕ್ಕೆ ಸಿ.ಎಂ ಸೂಚನೆ

Published:
Updated:

ಬೆಂಗಳೂರು: ಹೇಮಾವತಿ ಮತ್ತು ಎತ್ತಿನಹೊಳೆ ಯೋಜನೆಗಳಡಿ ಭೂಸ್ವಾಧೀನ ಪ್ರಕ್ರಿಯೆ ಮತ್ತು ಪರಿಹಾರ ವಿತರಣೆ ಚುರುಕುಗೊಳಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿದರು.

ಮುಖ್ಯಮಂತ್ರಿ ಗೃಹಕಚೇರಿ ‘ಕೃಷ್ಣಾ’ದಲ್ಲಿ ಹೇಮಾವತಿ ಜಲಾಶಯ ಮತ್ತು ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ಹಾಗೂ ಯಗಚಿ ಯೋಜನೆಗಳ ಭೂಪರಿಹಾರ ವಿತರಣೆ ಸಂಬಂಧ ಸಭೆ ನಡೆಸಿದರು.

ಹಾಸನ ಜಿಲ್ಲೆಯ ಹೇಮಾವತಿ ಯೋಜನೆ ವ್ಯಾಪ್ತಿಯಡಿ (ಹೇಮಾವತಿ ಮತ್ತು ಯಗಚಿ ಜಲಾಶಯ) 2228 ಭೂ ಪಾವತಿ ಪ್ರಕರಣಗಳು ಬಾಕಿ ಇವೆ. ಈ ಪ್ರಕರಣಗಳಲ್ಲಿ ₹350 ಕೋಟಿ ಮೊತ್ತ ಪಾವತಿ ಮಾಡಬೇಕಾಗಿದೆ. ಈ ಪೈಕಿ 975 ಎಲ್‌ಸಿಎ ಪ್ರಕರಣಗಳಿದ್ದು, ₹94.28 ಕೋಟಿ ಮೊತ್ತವನ್ನು ನ್ಯಾಯಾಲಯಕ್ಕೆ ಠೇವಣಿ ಮಾಡಬೇಕಾಗಿದೆ. ಆದಷ್ಟು ಬೇಗ ಠೇವಣಿ ಹಣ ಬಿಡುಗಡೆ ಮಾಡಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !