ಶುಕ್ರವಾರ, ಜೂನ್ 5, 2020
27 °C

ರಂಗದಲ್ಲೇ ಕುಸಿದು ಯಕ್ಷಗಾನ ಕಲಾವಿದ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಬೈಂದೂರು ತಾಲ್ಲೂಕಿನ ಯಳಜಿತ ಗ್ರಾಮದ ಜೋಗಿಜಡ್ಡು ಎಂಬಲ್ಲಿ ಭಾನುವಾರ ರಾತ್ರಿ ಯಕ್ಷಗಾನ ಮಾಡುತ್ತಿರುವಾಗಲೇ ಹೃದಯಾಘಾತ ಸಂಭವಿಸಿ ಖ್ಯಾತ ಯಕ್ಷಗಾನ ಕಲಾವಿದ ಹುಡುಗೋಡು ಚಂದ್ರಹಾಸ (52) ರಂಗಸ್ಥಳದಲ್ಲಿಯೇ ಮೃತಪಟ್ಟರು.

ಕಲಾಧರ ಯಕ್ಷಗಾನ ಬಳಗ ಜಲವಳ್ಳಿ, ಈ ಮೇಳದ ವತಿಯಿಂದ ನಡೆಯುತ್ತಿದ್ದ ಯಕ್ಷಗಾನದಲ್ಲಿ ಅತಿಥಿ ಕಲಾವಿದರಾಗಿ ಭಾಗವಹಿಸಿ ಕುಣಿಯುತ್ತಿದ್ದಾಗ ರಂಗದಲ್ಲಿ ಹುಡುಗೋಡು ಚಂದ್ರಹಾಸ ಅವರು ಕುಸಿದು ಬಿದ್ದರು.

ಚಂದ್ರಹಾಸ ಅವರು ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಕಲಾವಿದರು. ಭೀಷ್ಮವಿಜಯದ ಸಾಲ್ವನ ಪಾತ್ರ ಅವರಿಗೆ ಹೆಸರು ತಂದುಕೊಟ್ಟಿತ್ತು. ಭಾನುವಾರ ಕೂಡ ಅವರು ಭೀಷ್ಮ ವಿಜಯ ಪ್ರಸಂಗದಲ್ಲಿ ಸಾಲ್ವನ ಪಾತ್ರ ನಿರ್ವಹಿಸುತ್ತಿದ್ದರು. ಸಾಲ್ವ ಹಾಗೂ ಭೀಷ್ಮನ ಸಂಭಾಷಣೆಯ ಮಧ್ಯೆ ಕುಸಿದು ಬಿದ್ದರು. 

ಚಂದ್ರಹಾಸ ಹುಡಗೋಡ್‌ ಫೇಸ್‌ಬುಕ್‌ ಖಾತೆಯಿಂದ ಪ್ರಸಂಗ ಲೈವ್‌ ಮಾಡಲಾಗುತ್ತಿತ್ತು. ಚಂದ್ರಹಾಸ ಅವರು ಹೊನ್ನಾವರ ಸಮೀಪದ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಆಗಿದ್ದರು. 

ಹೃದಯಾಘಾತದಿಂದ ರಂಗದ ಮೇಲೆಯೇ ಕುಸಿದ ಅವರನ್ನು ತಕ್ಷಣವೇ ಬೈಂದೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಚಂದ್ರಹಾಸ ಅವರ ‍ಪುತ್ರ ಪ್ರದೀಪ್‌ ಸಹ ಪ್ರಸಂಗದಲ್ಲಿ ಭಾಗಿಯಾಗಿದ್ದರು. ಇಡೀ ರಾತ್ರಿಯ ಪ್ರದರ್ಶನವನ್ನು ರದ್ದುಪಡಿಸಲಾಯಿತು. 

ಹುಡುಗೋಡು ಚಂದ್ರಹಾಸ ಅವರು ಬಡಗುತಿಟ್ಟಿನ ಖ್ಯಾತ ಡೇರೆ ಮೇಳಗಳಾದ ಪೆರ್ಡೂರು, ಸಾಲಿಗ್ರಾಮ ಮೇಳದಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದರು. ಕಳೆದ 3 ವರ್ಷಗಳಿಂದ ಕೇವಲ ಅತಿಥಿ ಕಲಾವಿದರಾಗಿ ಮಾತ್ರ ಭಾಗವಹಿಸುತ್ತಿದ್ದರು. ಯಕ್ಷಗಾನ ಪ್ರಸಂಗಗಳಲ್ಲಿ ಖಳನ ಪಾತ್ರ ನಿರ್ವಹಿಸುತ್ತಿದ್ದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು