ಬುಧವಾರ, ಜೂನ್ 3, 2020
27 °C

ಯಲ್ಲಮ್ಮದೇವಿಯ ಮಂಗಳಸೂತ್ರ ಹರಿದಿಲ್ಲ: ಕಾರ್ಯನಿರ್ವಾಹಕ ಅಧಿಕಾರಿ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿರುವ ರೇಣುಕಾ ಯಲ್ಲಮ್ಮ ದೇವಿಯ ಮಂಗಳಸೂತ್ರ ಹರಿದು ಬಿದ್ದಿದೆ ಎಂದು ಕೆಲವರು ವದಂತಿ ಹಬ್ಬಿಸಿದ್ದಾರೆ. ಅದು ಸುಳ್ಳು ಸುದ್ದಿಯಾಗಿದ್ದು, ಯಾರೂ ನಂಬಬಾರದು’ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ತಿಳಿಸಿದ್ದಾರೆ.

‘ವಿಶ್ವ ಕೊರೊನಾ ವೈರಾಣು ಸೋಂಕು ಮುಕ್ತವಾಗಲೆಂದು ಪ್ರಾರ್ಥಿಸಿ ದೇವಿಗೆ ನಿತ್ಯ ಬೆಳಗ್ಗೆ ಮತ್ತು ಸಂಜೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಆದರೆ, ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶ ಹರಿಬಿಟ್ಟಿದ್ದಾರೆ. ಮಂಗಳವಾರ ರಾತ್ರಿಯಿಂದ ಇಂಥದ್ದೊಂದು ಸುಳ್ಳು ಸುದ್ದಿ ಹರಿದಾಡಿದ್ದರಿಂದ ರಾಜ್ಯ ಹಾಗೂ ಹೊರ ರಾಜ್ಯಗಳ ಭಕ್ತರು ಆತಂಕಗೊಂಡಿದ್ದಾರೆ. ನನಗೆ ಹಾಗೂ ದೇವಸ್ಥಾನದ ಸಿಬ್ಬಂದಿಗೆ ಕರೆ ಮಾಡಿ ವಿಚಾರಿಸುತ್ತಿದ್ದಾರೆ. ವಾಸ್ತವವಾಗಿ ಅಂತಹ ಯಾವುದೇ ಘಟನೆ ನಡೆದಿಲ್ಲ. ಭಕ್ತರು ಆತಂಕಕ್ಕೆ ಒಳಗಾಗಬಾರದು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು