ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೀಕರ ಅಪಘಾತ 8 ಸಾವು, 30 ಜನರಿಗೆ ಗಂಭೀರ ಗಾಯ

Last Updated 26 ಮೇ 2018, 13:43 IST
ಅಕ್ಷರ ಗಾತ್ರ

ರಿಮ್ಮನಗುಡ್ಡ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ 8 ಜನರು ಮೃತಪಟ್ಟು 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸಿದ್ದಿಪೇಟೆ ಜಿಲ್ಲೆಯ ರಿಮ್ಮನಗುಡ್ಡದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ತೆಲಂಗಾಣ ಸಾರಿಗೆ ಸಂಸ್ಥೆಯ ಬಸ್ಸು ಪಲ್ಟಿ ಹೊಡೆದ ಪರಿಣಾಮ ಈ ಸರಣಿ ಅವಘಡ ಸಂಭವಿಸಿದೆ. ಪಲ್ಟಿ ಹೊಡೆದ ಬಸ್ಸಿಗೆ ಕಾರು, ಲಾರಿ ಮತ್ತು ಟೆಂಪೋ ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 8 ಜನ ಸಾವನ್ನಪ್ಪಿದ್ದು 8 ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರು ಅಪಘಾತದ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ನೆರವಾದರು ಎಂದು ಪೊಲೀಸರು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT