ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವೋಸ್‌ನಿಂದ ವಾಪಾಸ್ಸಾದ ನಂತರ ಸಂಪುಟ ವಿಸ್ತರಣೆ: ಯಡಿಯೂರಪ್ಪ

Last Updated 19 ಜನವರಿ 2020, 7:20 IST
ಅಕ್ಷರ ಗಾತ್ರ

ಬೆಂಗಳೂರು: ದಾವೋಸ್‌ ಪ್ರವಾಸದಿಂದ ವಾಪಸ್‌ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭಾನುವಾರ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸಂಪುಟ ವಿಸ್ತರಣೆ ಬಗ್ಗೆ ಅಮಿತ್ ಶಾ ಅವರ ಬಳಿ ಅರ್ಧಗಂಟೆ ಮಾತುಕತೆ ನಡೆಸಲಾಗಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ವಿಶ್ವ ಆರ್ಥಿಕ ಶೃಂಗಸಭೆಯಿಂದ ವಾಪಸ್‌ ಬಂದ ಕೂಡಲೇ ಆ ಬಗ್ಗೆ ಗಮನ ಹರಿಸುತ್ತೇನೆ‘ ಎಂದು ಹೇಳಿದರು.

‘ದಾವೋಸ್‌ನಲ್ಲಿ ನಡೆಯುತ್ತಿರುವ ಈ ಶೃಂಗಸಭೆಯಲ್ಲಿ 38 ಕೈಗಾರಿಕೋದ್ಯಮಗಳು ಮತ್ತು ಹೂಡಿಕೆದಾರರ ಜೊತೆ ಸಂವಾದ, ಮಾತುಕತೆ ನಿಶ್ಚಯವಾಗಿ. ಇದರಿಂದ ರಾಜ್ಯಕ್ಕೆ ಬಂಡವಾಳ ಹರಿದು ಬರುdAವ ಸಾಧ್ಯತೆ ಹೆಚ್ಚಿದೆ. ಅಲ್ಲದೆ, ಉದ್ಯೋಗಾವಕಾಶವು ದೊರೆಯಲಿದೆ’ ಎಂದು ಹೇಳಿದರು.

‘ಕೈಗಾರಿಕೋದ್ಯಮಿಗಳಿಗೆ ಮತ್ತು ಹೂಡಿಕೆದಾರರಿಗೆ ನಮ್ಮ ಇತಿ ಮಿತಿಯಲ್ಲಿ ಅಗತ್ಯ ಸೌಲಭ್ಯಗಳನ್ನು ನೀಡುವ ಪ್ರಯತ್ನ ಮಾಡುವ ಭರವಸೆ ನೀಡುವುದರ ಜೊತೆಗೆ ಅವರಿಗೆ ಇರುವ ಸಂದೇಹಗಳನ್ನು ದೂರ ಮಾಡುವ ಪ್ರಯತ್ನ ಮಾಡುತ್ತೇನೆ’ ಎಂದು ವಿವರಿಸಿದರು.

‘ಜಗತ್ತಿನಲ್ಲಿ ಆರ್ಥಿಕ ಹಿಂಜರಿತ ಇದ್ದರೂ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಚೆನ್ನಾಗಿಯೇ ಇದೆ. ಹಿಂದಿನ ಜಾಗತಿಕ ಹೂಡಿಕೆದಾರರ ಸಮಾವೇಶ ಬಹಳ ಯಶಸ್ವಿಯಾಗಿತ್ತು. ಇಲ್ಲಿ ಹೆಚ್ಚು ಹೆಚ್ಚು ಹೂಡಿಕೆದಾರರು ಬರಬೇಕು. ಅದರಿಂದ ಇಲ್ಲಿನ ಬಹಳಷ್ಟು ಮಂದಿಗೆ ಉದ್ಯೋಗ ಸಿಗಬೇಕು ಎಂದು ಅಪೇಕ್ಷಿಸುತ್ತೇನೆ. ಈ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇನೆ. ದಾವೋಸ್‌ಗೆ ನನ್ನೊಂದಿಗೆ ಜಗದೀಶ್‌ ಶೆಟ್ಟರು ಬರುತ್ತಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT