ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಇಡೀ ದಿನ ದೆಹಲಿ ‘ದೊರೆ’ಗಳ ಆಹ್ವಾನದ ನಿರೀಕ್ಷೆಯಲ್ಲಿ ಕಾದು ಕುಳಿತಿದ್ದರು.

ಉಪಚುನಾವಣೆಯಲ್ಲಿ ಗೆದ್ದ ಶಾಸಕರಿಂದ ಒತ್ತಡಕ್ಕೆ ಒಳಗಾಗಿರುವ ಮುಖ್ಯಮಂತ್ರಿಯವರು ಸಂಪುಟ ವಿಸ್ತರಣೆಗೆ ತಕ್ಷಣವೇ ವರಿಷ್ಠರಿಂದ ಒಪ್ಪಿಗೆ ಪಡೆಯಲು ತೀರ್ಮಾನಿಸಿ ಸೋಮವಾರ ರಾತ್ರಿಯೇ ದೆಹಲಿಗೆ ಹೋಗಲು ಸಿದ್ಧತೆ ನಡೆಸಿದ್ದರು. ಇಡೀ ದಿನ ಆಹ್ವಾನ ಬರುವುದೆಂದು ದೂರವಾಣಿಗಾಗಿ ಕಾದು ಕುಳಿತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಬೆಳಿಗ್ಗೆ ಬೆಂಗಳೂರಿನಿಂದ ದೇವದುರ್ಗಕ್ಕೆ ಪ್ರವಾಸಕ್ಕೆ ತೆರಳುವುದಕ್ಕೆ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಈ ವಿಷಯವಾಗಿ ಮಾತನಾಡಿ, ‘ಮಂತ್ರಿ ಮಂಡಲ ವಿಸ್ತರಣೆ ಕುರಿತು ಊಹಾಪೋಹಗಳು ಪ್ರಕಟ ಆಗುತ್ತಿವೆ. ಅವುಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಂದಿರುವವರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. ನೂರಕ್ಕೆ ನೂರರಷ್ಟು ಸಂಪುಟ ವಿಸ್ತರಣೆ ಆಗಲಿದೆ. ಊಹಾಪೋಹಗಳಿಗೆ ಕಿವಿಗೊಡಬಾರದು’ ಎಂದು ಹೇಳಿದರು.

‘ಇವತ್ತು (ಸೋಮವಾರ) ಭೇಟಿಗೆ ಅಮಿತ್ ಶಾ ಅವರು ಸಮಯ ನೀಡಿದ್ದರು. ಆದರೆ, ದೇವದುರ್ಗದ ಹಾಲುಮತದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದ್ದರಿಂದ ನಾನೇ ದೆಹಲಿಗೆ ಹೋಗಲು ಸಾಧ್ಯವಾಗಲಿಲ್ಲ. ಮಂಗಳವಾರ ಭೇಟಿ ಮಾಡುತ್ತೇನೆ. ಒಂದು ವೇಳೆ ನಾಳೆ ಅವರಿಗೆ ಸಮಯ ಇಲ್ಲವಾದರೆ ಇದೇ 18ರಂದು ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಅಮಿತ್ ಶಾ ಭೇಟಿ ಕಾರ್ಯಕ್ರಮವಿದೆ. ಆ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡುತ್ತೇನೆ’ ಎಂದು ತಿಳಿಸಿದರು.

‘ಸರ್ಕಾರದಲ್ಲಿ ಸಚಿವ ಸ್ಥಾನ ಕೇಳುವುದು ನಮ್ಮ ಹಕ್ಕು’ ಎಂದು ಬಿಜೆಪಿ ಮುಖಂಡ ಎಚ್.ವಿಶ್ವನಾಥ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.