ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಮತ್ತೆ 'ಯಶಸ್ವಿನಿ': ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ

66ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಮುಖ್ಯಮಂತ್ರಿ ಹೇಳಿಕೆ
Last Updated 14 ನವೆಂಬರ್ 2019, 19:45 IST
ಅಕ್ಷರ ಗಾತ್ರ

ತುಮಕೂರು: ‘ಸರ್ಕಾರಕ್ಕೆ ಎಷ್ಟೇ ಆರ್ಥಿಕ ಹೊರೆಯಾದರೂ ಯಶಸ್ವಿನಿ ಆರೋಗ್ಯ ಸೇವಾ ಯೋಜನೆಯನ್ನು ಪುನಃ ಆರಂಭಿಸುತ್ತೇವೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆಯೋಜಿಸಿರುವ ‘66ನೇ ಅಖಿಲ ಭಾರತ ಸಹಕಾರ ಸಪ್ತಾಹ’ ಉದ್ಘಾಟಿಸಿ ಅವರು ಮಾತನಾಡಿದರು.

‘ಯೋಜನೆ ಜಾರಿಗೆ ಬಹಳ ಒತ್ತಾಯ ಕೇಳಿ ಬರುತ್ತಿದೆ. ಯೋಜನೆಯಿಂದ 20 ರಿಂದ 25 ಲಕ್ಷ ರೈತರಿಗೆ ಅನುಕೂಲ ಆಗಲಿದೆ’ ಎಂದರು.

‘ತುಮಕೂರಿನಲ್ಲಿ 10 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೇರಿ ಮತ್ತು ತಿಪಟೂರಿನ 100 ಎಕರೆ ಜಾಗದಲ್ಲಿ ತೋಟಗಾರಿಕಾ ಕಾಲೇಜು ಸ್ಥಾಪಿಸುವ ನಿರ್ಧಾರಗಳಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT