ಶನಿವಾರ, ಸೆಪ್ಟೆಂಬರ್ 25, 2021
22 °C

ಯಶವಂತಪುರ–ಕೆ.ಆರ್‌.ಪೇಟೆ: ಬಿಜೆಪಿ–ಜೆಡಿಎಸ್‌ ನಡುವೆ ಜಿದ್ದಾಜಿದ್ದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು ಯಶವಂತಪುರ ಮತ್ತು ಕೆ.ಆರ್.ಪೇಟೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ.

9ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್‌.ಟಿ. ಸೋಮಶೇಖರ್ ಅವರು 61700 ಮತಗಳನ್ನು ಪಡೆದರೆ, ಜೆಡಿಎಸ್‌ ಪಕ್ಷದ ಅಭ್ಯರ್ಥಿ ಜವರಾಯಿಗೌಡ ಅವರು 61780 ಮತಗಳನ್ನು ಪಡೆದಿದ್ದಾರೆ. ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೇವಲ 8000 ಮತಗಳನ್ನು ಪಡೆದಿದ್ದಾರೆ. 

ಇನ್ನು ಕೆ. ಆರ್. ಪೇಟೆಯಲ್ಲಿ ಕೂಡ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿ ಪೈಟ್‌ ನಡೆಯುತ್ತಿದೆ. 9ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ 822 ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ನಾರಾಯಣಗೌಡ 30,654 ಮತಗಳನ್ನು ಪಡೆದರೆ, ಜೆಡಿಎಸ್‌ನ ಬಿ.ಎಲ್.ದೇವರಾಜು 29,832 ಮತಗಳನ್ನು ಪಡೆದಿದ್ದಾರೆ. ಇನ್ನು ಕಾಂಗ್ರೆಸ್‌ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್- 19,869 ಮತಗಳನ್ನು ಗಳಿಸಿದ್ದಾರೆ.

ಈ ಎರಡು ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು ಕೊನೆಯ ಹಂತದ ಮತ ಎಣಿಕೆವರೆಗೂ ಕೂತುಹಲ ಹೆಚ್ಚಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು