ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎತ್ತಿನಹೊಳೆ| ಮಾರ್ಚ್‌ಗೆ ಮೊದಲ ಹಂತ ಪೂರ್ಣ: ಸಚಿವ ರಮೇಶ ಜಾರಕಿಹೊಳಿ

ವಿಶ್ವೇಶ್ವರಯ್ಯ ಜಲ ನಿಗಮದ ಸಭೆಯಲ್ಲಿ ರಮೇಶ ಜಾರಕಿಹೊಳಿ ಹೇಳಿಕೆ
Last Updated 11 ಮೇ 2020, 20:00 IST
ಅಕ್ಷರ ಗಾತ್ರ

ಬೆಂಗಳೂರು: ‘ಎತ್ತಿನಹೊಳೆ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದ್ದು, ಮುಂದಿನ ಮಾರ್ಚ್ ವೇಳೆಗೆ ಮೊದಲನೇ ಹಂತದ ಕಾಮಗಾರಿಗಳು ಪೂರ್ಣಗೊಳ್ಳಲಿವೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿನ ವಿಶ್ವೇಶ್ವರಯ್ಯ ಜಲ ನಿಗಮದ (ವಿಜೆಎನ್‌ಎಲ್‌) ಕಚೇರಿಯಲ್ಲಿ ಸೋಮವಾರ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ‘ಐದು ಸಿವಿಲ್‌ ಮತ್ತು ಎರಡು ಎಲೆಕ್ಟ್ರಿಕಲ್ ಪ್ಯಾಕೇಜ್ ಕಾಮಗಾರಿಗಳು ಪ್ರಗತಿಯಲ್ಲಿವೆ. ಮುಂದಿನ ಮಾರ್ಚ್‌ಗೆ ಮೊದಲು ಮೊದಲ ಹಂತ ಕೊನೆಗೊಳಿಸಿ, ಮಳೆಗಾಲದ ನೀರನ್ನು ಹರಿಸುವಂತಾಗಬೇಕು’ ಎಂದು ಹೇಳಿದರು.

‘ಯೋಜನೆಗೆ ಕಾಲಮಿತಿಯೊಳಗೆ ವಿದ್ಯುತ್ ಪೂರೈಸಬೇಕು. ಹಲವಾರು ಪ್ರದೇಶಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ರೈತರ ಮನ ಒಲಿಸಿ ಪರಿಹಾರ ನೀಡಬೇಕು’ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ವಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ರಾವ್ ಪೇಶ್ವೆ ಸಹಿತ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT