ಶುಕ್ರವಾರ, ಏಪ್ರಿಲ್ 3, 2020
19 °C
ಯುವತಿ ಹೀಗೇ ಘೋಷಣೆ ಕೂಗುತ್ತಲೇ ಮೈಕ್‌ ಕಿತ್ತುಕೊಂಡ ಸಂಸದ ಅಸಾದುದ್ದೀನ್‌ ಒವೈಸಿ ನಾವು ಭಾರತೀಯರು ಎಂದು ಕೋಪದಿಂದ ಬುದ್ಧಿ ಹೇಳಿದ್ದಾರೆ

ಬೆಂಗಳೂರಿನಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಯುವತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ‘ಹಿಂದೂ–ಮುಸ್ಲಿಂ–ಸಿಖ್–ಇಸಾಯಿ ಫೆಡರೇಷನ್ ಬೆಂಗಳೂರು’ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಪ್ರತಿಭಟನೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಅಮೂಲ್ಯ ಎಂಬ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆ ಸಭೆ ಆರಂಭವಾಗುತ್ತಿದ್ದಂತೆ ವೇದಿಕೆ ಏರಿದ ಅಮೂಲ್ಯ, ಎರಡು ಬಾರಿ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದರು. ತಕ್ಷಣ ಅಲ್ಲೇ ಇದ್ದ ಪೊಲೀಸರು, ಅಮೂಲ್ಯ ಅವರನ್ನು ತಮ್ಮ ವಶಕ್ಕೆ ಪಡೆದುಕೊಂಡರು.

ಪ್ರತಿಭಟನಾ ಸಭೆಯಲ್ಲಿ ಸಂಸದ ಅಸಾದುದ್ದೀನ್‌ ಓವೈಸಿ ಅವರು ತಕ್ಷಣ ಯುವತಿ ಕೈಯಿಂದ ಮೈಕ್‌ ಎಳೆದುಕೊಂಡು, ‘ಯುವತಿ ಈ ರೀತಿ ಘೋಷಣೆ ಕೂಗಬಾರದಿತ್ತು. ನಾವು ಈ ಘೋಷಣೆಯನ್ನು ಖಂಡಿಸುತ್ತೇವೆ’ ಎಂದರು. ಸಂಘಟಕರು ಕೂಡಾ ಓವೈಸಿ ಮಾತಿಗೆ ದನಿಗೂಡಿಸಿದರು.

‘ನಮ್ಮದು ಹಿಂದೂಸ್ತಾನ. ನಾವೆಲ್ಲರೂ ಹಿಂದೂಸ್ತಾನಿಗಳು. ಆಕೆ ತಪ್ಪಾಗಿ ಘೋಷಣೆ ಕೂಗಿದ್ದಾಳೆ’ ಎಂದೂ ಅವರು ಹೇಳಿದರು. ಅಷ್ಟರಲ್ಲಿ ಅಮೂಲ್ಯ ಅವರನ್ನು ಪೊಲೀಸರು ಸ್ಥಳದಿಂದ ಕರೆದೊಯ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ‘ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆದಿದೆ. ಇಂತಹ ಹೇಳಿಕೆಗಳಿಂದ ಮನಸ್ಸಿಗೆ ನೋವುಂಟಾಗುತ್ತದೆ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಇಂಥವರ ವಿರುದ್ದ‌ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು,’ ಎಂದು ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು