ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಕ್ ಬೌನ್ಸ್ ಪ್ರಕರಣ: ವೈ.ಎಸ್.ವಿ. ದತ್ತಾ ವಿರುದ್ಧ ಜಾಮೀನುರಹಿತ ವಾರಂಟ್

Last Updated 23 ಮಾರ್ಚ್ 2019, 10:33 IST
ಅಕ್ಷರ ಗಾತ್ರ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯಾದ ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ವೈ ಎಸ್. ವಿ ದತ್ತಾ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ದತ್ತಾ ಅವರಿಗೆ "ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ" ಈ ಮೊದಲು ಸಮನ್ಸ್ ಜಾರಿಗೊಳಿಸಿದ್ದರೂ ವಿಚಾರಣೆಗೆ ದತ್ತಾ ಗೈರು ಹಾಜರಾಗಿದ್ದರು.

ಶನಿವಾರ ನಡೆದ ವಿಚಾರಣೆಗೂ ಅವರು ಹಾಜರಾಗದ ಕಾರಣ ಕೋರ್ಟ್ ನೊಟೀಸ್ ಜಾರಿಗೊಳಿಸಿತ್ತು.

ಪ್ರಕರಣವೇನು?:"ಬೇಲೂರಿನ ಆರ್. ಸುಬ್ರಹ್ಮಣ್ಯ ಅವರ ಬಳಿ ದತ್ತಾ ₹ 5 ಲಕ್ಷ ಪಡೆದಿದ್ದರು‌. ಅದರಲ್ಲಿ ₹ 2 ಲಕ್ಷ ಪಾವತಿಸಿದ್ದಾರೆ. ಉಳಿದ ಮೊತ್ತಕ್ಕೆ ಚೆಕ್ ನೀಡಿದ್ದಾರೆ. ಆದರೆ ಅದು ನಗದು ಆಗಿಲ್ಲ" ಎಂಬುದು ಆರೋಪ.

ಕಡೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರೂ ಆದ ದತ್ತಾ ಸದ್ಯ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT