ಮಂಗಳವಾರ, ಮಾರ್ಚ್ 21, 2023
27 °C

ಶಾಸಕ ಜಮೀರ್ 'ಪಾದಪೂಜೆ' ಅವಾಂತರ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಬಲಿಗರು, ಅಭಿಮಾನಿಗಳಿಂದ ಪಾದ ಪೂಜೆ ಮಾಡಿಸಿಕೊಳ್ಳುವ ಮೂಲಕ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದ್ದಾರೆ.

ಕೋವಿಡ್-19, ಲಾಕ್‌ಡೌನ್ ಸಂದರ್ಭಗಳಲ್ಲಿ ವಿವಾದಾತ್ಮಕ ಹೇಳಿಕೆಗಳಿಂದ ಚರ್ಚೆಯಲ್ಲಿದ್ದ ಜಮೀರ್, ಅವರಿಗೆ ಪಾದಪೂಜೆ ಮಾಡುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೆಂಬಲಿಗರು ಜಮೀರ್ ಅವರ ಕಾಲು ತೊಳೆದು, ಹೂ ಹಾಕಿ ಪಾದಪೂಜೆ ಮಾಡಿದ ಬಳಿಕ ಬಟ್ಟೆಯಿಂದ ಒರೆಸಿರುವ ದೃಶ್ಯ ವಿಡೊಯೋದಲ್ಲಿದೆ. ಈ ವೇಳೆ, ಅಂತರ ಕೂಡಾ ಕಾಪಾಡಿಲ್ಲ!

ಜಮೀರ್ ಅವರು ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರವನ್ನು ಉಚಿತವಾಗಿ ನೆರವೇರಿಸಲು ಸಹಾಯ ಮಾಡುತ್ತಿದ್ದಾರಂತೆ. ಈ ಕಾರಣಕ್ಕೆ ಜಮೀರ್ ಅವರಿಗೆ ಬೆಂಬಲಿಗರು ಸನ್ಮಾನ ಮಾಡಿದ್ದಾರೆ ಎಂಬ ಮಾಹಿತಿಯಿದೆ.

ಚಾಮರಾಜಪೇಟೆಯ ಕೆಂಪೇಗೌಡ ನಗರ 5ನೇ ಹಂತದಲ್ಲಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಜೂನ್‌ 28ರಂದು ಈ ಕಾರ್ಯಕ್ರಮ ನಡೆದಿದೆ ಎಂದು ಗೊತ್ತಾಗಿದೆ. ‘ಬಂಗಾರದ ಮನುಷ್ಯ ಜಮೀರಣ್ಣ‘ ಅಭಿಮಾನಿಗಳ ಬಳಗದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂಬ ಮಾಹಿತಿಯಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು