ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಖಾತೆಗೆ₹2 ಸಾವಿರ

Last Updated 14 ಆಗಸ್ಟ್ 2019, 20:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ರಾಜ್ಯ ಸರ್ಕಾರ ಸಹ ಪ್ರತಿ ರೈತರಿಗೆ ₹4 ಸಾವಿರ ಹೆಚ್ಚುವರಿ ನೆರವು ನೀಡುವುದಾಗಿ ಪ್ರಕಟಿಸಿದ್ದು, ಅದರ ಮೊದಲ ಕಂತು ₹2 ಸಾವಿರ ಹಣ ನೀಡುವ ಪ್ರಕ್ರಿಯೆ ಆರಂಭವಾಗಿದೆ.

ವಿಧಾನಸೌಧದಲ್ಲಿ ಬುಧವಾರ ರೈತರ ಖಾತೆಗೆ ಹಣ ವರ್ಗಾವಣೆ ಪ್ರಕ್ರಿಯೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

‘₹4 ಸಾವಿರ ಹೆಚ್ಚುವರಿ ನೆರವು ಪ್ರಕಟಿಸಲಾಗಿದ್ದು, ಈಗ ₹2 ಸಾವಿರ ನೀಡುತ್ತಿದ್ದು, ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಮುಂದಿನ ತಿಂಗಳು ಉಳಿದ ₹2 ಸಾವಿರ ನೀಡಲಾಗುವುದು. ಈ ಯೋಜನೆಯಲ್ಲಿ ಕೇಂದ್ರ ಸರ್ಕಾರಪ್ರತಿ ರೈತರಿಗೆ ₹6 ಸಾವಿರ ನೀಡುತ್ತಿದ್ದು, ರಾಜ್ಯದ ಪಾಲು ಸೇರಿದರೆ ಒಟ್ಟು ₹10 ಸಾವಿರ ನೆರವು ಸಿಕ್ಕಂತಾಗುತ್ತದೆ. ಇಂಥ ಸಂಕಷ್ಟದ ಪರಿಸ್ಥಿತಿಯಲ್ಲಿಈ ಹಣ ನೆರವಿಗೆ ಬರಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT