ಸೋಮವಾರ, ಜೂನ್ 21, 2021
21 °C

ಸಂಜಯನಗರ | ಪೊಲೀಸರ ಮೇಲೆ ಹಲ್ಲೆ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಂಜಯನಗರದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿಗಳಾದ ತಾಜುದ್ದೀನ್ (25) ಹಾಗೂ ಕುತುಬ್ಬುದ್ದೀನ್ (25) ಬಂಧಿತರು.

ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಕಾನ್‌ಸ್ಟೆಬಲ್ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದರು.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, 'ಇದು ಇಡೀ ಇಲಾಖೆಗೆ ಆದ ಅವಮಾನ. ಅವರು ಹೊಡೆದಿದ್ದು ಅವರಿಬ್ಬರಿಗರಲ್ಲ (ಕಾನ್‌ಸ್ಟೆಬಲ್‌ಗಳು) ಇಡೀ ಪೊಲೀಸ್ ಸಮೂಹಕ್ಕೆ' ಎಂದರು.

'ಅವರ ಮೇಲೆ ಹಲ್ಲೆ ಮಾಡಿದ್ರೂ ನನ್ನ ಮೇಲೆ ಹಲ್ಲೆ ಮಾಡಿದ್ರೂ ಒಂದೇ. ಇವತ್ತು ಇವರು ಹೊಡೆದಿದ್ದಾರೆ, ನಾಳೆ ಇನ್ನೊಬ್ಬರು ಹೊಡಿಯುತ್ತಾರೆ. ನಾವು ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡಿದ್ದೇವೆ. ಹಲ್ಲೆ ಮಾಡಿರುವವರಿಗೆ ಕುಮ್ಮಕ್ಕು ನೀಡಿರುವರ ವಿರುದ್ದವೂ ಕ್ರಮ ಕೈಗೊಳ್ಳುತ್ತೇವೆ' ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು