ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಗಟ್ಟೆ ಆಧಾರದಲ್ಲಿ ವಿ.ವಿ. ಪ್ಯಾಟ್‌ಗಳ ಪೂರೈಕೆ

Last Updated 25 ಮಾರ್ಚ್ 2019, 14:49 IST
ಅಕ್ಷರ ಗಾತ್ರ

ವಿಜಯಪುರ:ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.

ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಥಾಪಿಸಲಾದ 2101 ಮತಗಟ್ಟೆಗಳಲ್ಲಿ, ಚುನಾವಣಾ ಆಯೋಗ ನಿಗದಿಪಡಿಸಿದ ಶೇಕಡಾವಾರು ಪ್ರಮಾಣದ ಮೇಲೆ ಬ್ಯಾಲೆಟ್ ಯೂನಿಟ್, ಕಂಟ್ರೋಲ್ ಯೂನಿಟ್ ಹಾಗೂ ವಿ.ವಿ. ಪ್ಯಾಟ್‌ಗಳನ್ನು ಒದಗಿಸಲಾಗುತ್ತದೆ ಎಂದು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತಿಳಿಸಿದರು.

ತಮ್ಮ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ, ಚುನಾವಣಾ ಆಯೋಗವು ಆಟೋ ಅಲಾಟ್ಮೆಂಟ್ ಆಧಾರದ ಮೇಲೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಬ್ಯಾಲೆಟ್ ಯೂನಿಟ್, ಕಂಟ್ರೋಲ್ ಯೂನಿಟ್ ಹಾಗೂ ವಿ.ವಿ.ಪ್ಯಾಟ್‌ಗಳನ್ನು ಒದಗಿಸುತ್ತಿದೆ.

ಈಗಾಗಲೇ ಪ್ರಥಮ ರ‍್ಯಾಂಡಮೈಜೇಶನ್ ಪ್ರಕ್ರಿಯೆ ಮುಗಿದಿದ್ದು, ಮುಂದಿನ ದಿನಗಳಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮುಕ್ತಾಯದ ನಂತರ, ಅಂತಿಮ ಅಭ್ಯರ್ಥಿಗಳ ನಿರ್ಧಾರ ಆದ ತಕ್ಷಣ ಎರಡನೇ ರ‍್ಯಾಂಡಮೈಜೇಶನ್ ಮೂಲಕ ಅವಶ್ಯಕ ಮಾಹಿತಿಯನ್ನು ಸಂಬಂಧಪಟ್ಟವರಿಗೆ ಒದಗಿಸುವುದಾಗಿ ಪಾಟೀಲ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT