ಗುರುವಾರ , ಆಗಸ್ಟ್ 5, 2021
21 °C

'ಅಮೆರಿಕ ಲವ್ಸ್‌ ಇಂಡಿಯಾ': ಪ್ರಧಾನಿ ಮೋದಿ ಶುಭಾಶಯಕ್ಕೆ ಟ್ರಂಪ್‌ ಪ್ರತಿಕ್ರಿಯೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ಪ್ರಧಾನಿ ನರೇಂದ್ರ ಮೋದಿ– ಸಾಂದರ್ಭಿಕ ಚಿತ್ರ

ವಾಷಿಂಗ್ಟನ್‌: ಅಮೆರಿಕದ 244ನೇ ಸ್ವಾತಂತ್ರ್ಯ ದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕನ್ನರಿಗೆ ಶುಭ ಕೋರಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ 'ಅಮೆರಿಕ ಭಾರತವನ್ನು ಪ್ರೀತಿಸುತ್ತದೆ' ಎಂದಿದ್ದಾರೆ.

ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ಡೊನಾಲ್ಡ್‌ ಟ್ರಂಪ್‌ ಹಾಗೂ ಶ್ವೇತ ಭವನದ ಖಾತೆಗಳನ್ನು ಟ್ಯಾಗ್ ಮಾಡಿ, 'ಅಮೆರಿಕದ ಅಧ್ಯಕ್ಷ ಮತ್ತು ಅಮೆರಿಕದ ಜನೆತೆಗೆ 244ನೇ ಅಮೆರಿಕ ಸ್ವಾತಂತ್ರ್ಯೋತ್ಸವದ ಶುಭ ಕೋರುತ್ತೇನೆ. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಒಳಗೊಂಡವರಾಗಿ, ನಾವು ಸ್ವತಂತ್ರ ಮತ್ತು ಮಾನವ ಪ್ರಯತ್ನವನ್ನು ಕಾಪಿಟ್ಟುಕೊಳ್ಳುತ್ತೇವೆ.' ಎಂದು ಟ್ವೀಟಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಡೊನಾಲ್ಡ್‌ ಟ್ರಂಪ್‌, 'ಧನ್ಯವಾದಗಳು ಗೆಳೆಯ. ಅಮೆರಿಕ ಭಾರತವನ್ನು ಪ್ರೀತಿಸುತ್ತದೆ!' ಎಂದು ಟ್ವೀಟ್ ಮಾಡಿದ್ದಾರೆ. ದಕ್ಷಿಣ ಡಕೊಟಾದಲ್ಲಿ ಜುಲೈ 4ರಂದು ನಡೆದ ಅಮೆರಿಕದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಟ್ರಂಪ್‌ ಭಾಗಿಯಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು