ಮಂಗಳವಾರ, ಜೂಲೈ 7, 2020
28 °C
ಆ್ಯಪ್ ನಿಷೇಧ

'ನಮ್ಮ ಕಂಪನಿಗಳ ಹಿತ ಕಾಪಾಡುವುದು ಭಾರತದ ಕರ್ತವ್ಯ': ಚೀನಾ ಪ್ರತಿಕ್ರಿಯೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Prajavani

ಬೀಚಿಂಗ್: ಭದ್ರತಾ ವಿಚಾರಗಳ ಕಾರಣಕ್ಕಾಗಿ ಚೀನಾ ಮೂಲದ ಅಥವಾ ಚೀನಾ ಕಂಪೆನಿಗಳು ಅಭಿವೃದ್ಧಿಪಡಿಸಿರುವ 59 ಮೊಬೈಲ್ ಆ್ಯಪ್‌ಗಳನ್ನು ಭಾರತ ಸರ್ಕಾರ ನಿಷೇಧಿಸಿರುವುದರ ಬಗ್ಗೆ ಚೀನಾ ಸರ್ಕಾರ ತನ್ನ ಅಸಮಾಧಾನ ಹೊರಹಾಕಿದೆ.

’ಭಾರತ ಸರ್ಕಾರದ ನಿರ್ಧಾರದ ಸಾಧಕಬಾಧಕಗಳನ್ನು ನಾವು ಪರಿಶೀಲಿಸುತ್ತಿದ್ದೇವೆ. ವಸ್ತುಸ್ಥಿತಿಯನ್ನು ವಿಮರ್ಶಿಸುತ್ತಿದ್ದೇವೆ’ ಎಂದು ಚೀನಾ ವಿದೇಶಾಂಗ ಇಲಾಖೆಯ ವಕ್ತಾರ ಝ್ವಾ ಲಿಜಿಯಾನ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

’ವಿದೇಶಗಳಲ್ಲಿ ವ್ಯಾಪಾರ ಮಾಡುತ್ತಿರುವ ಚೀನಾದ ಕಂಪನಿಗಳು ಅಂತರರಾಷ್ಟ್ರೀಯ ನಿಯಮಗಳು ಮತ್ತು ಸ್ಥಳೀಯ ಕಾನೂನುಗಳಿಗೆ ಬದ್ಧವಾಗಿರಬೇಕು. ಚೀನಾ ಸೇರಿದಂತೆ ಎಲ್ಲ ಅಂತರರಾಷ್ಟ್ರೀಯ ಹೂಡಿಕೆದಾರರ ನ್ಯಾಯಬದ್ಧ ಹಕ್ಕುಗಳನ್ನು ಕಾಪಾಡುವುದು ಭಾರತ ಸರ್ಕಾರದ ಕರ್ತವ್ಯ’ ಎಂದು ಅವರು ತಿಳಿಸಿದರು.

ಎರಡೂ ದೇಶಗಳ ನಡುವೆ ಗಡಿ ಸಂಘರ್ಷ ಉದ್ಭವಿಸಿದ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಸೋಮವಾರ ಟಿಕ್‌ಟಾಕ್ ಸೇರಿದಂತೆ 59 ಚೀನಾ ಮೂಲಕ ಆ್ಯಪ್‌ಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು