ಬೀಜಿಂಗ್: ಕಳೆದ 24 ಗಂಟೆಗಳಲ್ಲಿ ಚೀನಾದಲ್ಲಿ 49 ಹೊಸ ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಿದ್ದು, ಇದೇ ವೇಳೆ 14 ಕೋವಿಡ್-19 ರೋಗಿಗಳು ಗುಣಮುಖರಾಗಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಭಾನುವಾರ ತಿಳಿಸಿದೆ.

49 ಪ್ರಕರಣಗಳ ಪೈಕಿ 33 ಪ್ರಕರಣಗಳು ಸ್ಥಳೀಯವಾಗಿದ್ದು, ಇನ್ನುಳಿದವು ಹೊರಗಿನಿಂದ ಬಂದವುಗಳಾಗಿವೆ.

ಆಯೋಗದ ಪ್ರಕಾರ, ಸ್ಥಳೀಯ ಪ್ರಕರಣಗಳಲ್ಲಿ ಹೆಚ್ಚಿನವು ವಾಯುವ್ಯ ಚೀನಾದ ಸ್ವಾಯತ್ತ ಪ್ರದೇಶವಾದ ಕ್ಸಿನ್‌ಜಿಯಾಂಗ್‌ನಲ್ಲಿ ದಾಖಲಾಗಿದ್ದು, ಅಲ್ಲಿ ಹೊಸದಾಗಿ ಸೋಂಕಿತ ಪ್ರಕರಣಗಳು ಇತ್ತೀಚೆಗೆ ವರದಿಯಾಗಿವೆ.

ಚೀನಾದಲ್ಲಿ ಈವರೆಗೂ 84,385 ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಸಾವಿನ ಸಂಖ್ಯೆ 4,634 ಆಗಿದೆ. ಇದುವರೆಗೂ 79,003 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊರಗಿನಿಂದ ಬಂದ 2,085 ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ ಚೀನಾದಲ್ಲಿ ಲಕ್ಷಣರಹಿತ 20 ಹೊಸ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಒಂಬತ್ತು ಹೊರಗಿನಿಂದ ಬಂದವುಗಳೇ ಆಗಿವೆ. ಈವರೆಗೂ 250ಕ್ಕೂ ಹೆಚ್ಚು ಪ್ರಕರಣಗಳು ಲಕ್ಷಣರಹಿತವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.