ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Update | 95 ಲಕ್ಷ ಸೋಂಕಿತರು ಗುಣಮುಖ; 6.51 ಲಕ್ಷ ಮಂದಿ ಸಾವು

ಅಕ್ಷರ ಗಾತ್ರ

ವಾಷಿಂಗ್ಟನ್: ಜಗತ್ತಿನಾದ್ಯಂತ 1 ಕೋಟಿ 63 ಲಕ್ಷ ಜನರಿಗೆ ಕೊರೊನಾವೈರಸ್‌ ಸೋಂಕು ದೃಢಪಟ್ಟಿದ್ದು, ಇದರಲ್ಲಿ 95 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಜಾನ್ಸ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾವೈರಸ್ ಸಂಪನ್ಮೂಲ ಕೇಂದ್ರ ತಿಳಿಸಿದೆ.

ವಿವಿ ಕೇಂದ್ರದ ಮಾಹಿತಿ ಪ್ರಕಾರ ಇದುವರೆಗೆ ಬರೋಬ್ಬರಿ 1,63,96,954 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 6,51,902 ಸೋಂಕಿತರು ಮೃತಪಟ್ಟಿದ್ದು, ಉಳಿದ 95,12,561 ಮಂದಿ ಗುಣಮುಖರಾಗಿದ್ದಾರೆ.

ಅತಿಹೆಚ್ಚು ಪ್ರಕರಣಗಳು ವರದಿಯಾಗಿರುವಅಮೆರಿಕದಲ್ಲಿ42,86,663 ಸೋಂಕಿತರು ಇದ್ದಾರೆ. ಸಾವಿನ ಸಂಖ್ಯೆ 1,47,588ಕ್ಕೆ ಏರಿದ್ದು, 13,25,804 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಅಮೆರಿಕದ ಬಳಿಕ ಅತಿಹೆಚ್ಚು ಪ್ರಕರಣಗಳು ವರದಿಯಾಗಿರುವುದು ಬ್ರೆಜಿಲ್‌ ಹಾಗೂ ಭಾರತದಲ್ಲಿ.

ಬ್ರೆಜಿಲ್‌ನಲ್ಲಿ 24,42,375 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ87,618 ಸೋಂಕಿತರು ಮೃತಪಟ್ಟಿದ್ದು,18,38,431 ಮಂದಿ ಗುಣಮುಖರಾಗಿದ್ದಾರೆ.

ಭಾರತದಲ್ಲಿ ಸೋಮವಾರ ಸಂಜೆ 8 ರವರೆಗೆ 14,35,453 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ9,17,568 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.32,771 ಜನರು ಮೃತಪಟ್ಟಿದ್ದಾರೆ. ಉಳಿದಂತೆ,ರಷ್ಯಾದಲ್ಲಿ 8,16,680, ದಕ್ಷಿಣ ಆಫ್ರಿಕಾದಲ್ಲಿ 4,52,529 ಹಾಗೂ ಮೆಕ್ಸಿಕೊದಲ್ಲಿ3,95,489 ಸೋಂಕು ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT