ಶುಕ್ರವಾರ, ಸೆಪ್ಟೆಂಬರ್ 17, 2021
29 °C

Covid-19 World Update | ವಿಶ್ವದಾದ್ಯಂತ 97 ಲಕ್ಷ ಮಂದಿ ಗುಣಮುಖ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಜಾನ್ಸ್‌ ಹಾಪ್ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾ ವೈರಸ್ ರಿಸೋರ್ಸ್‌ ಸೆಂಟರ್ ಮಾಹಿತಿ ಪ್ರಕಾರ, ವಿಶ್ವದಾದ್ಯಂತ 1,56,6‌5,350 ಮಂದಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಇದುವರೆಗೆ 97,15,983 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇದುವರೆಗೆ 6,38,169 ಮಂದಿ ಮೃತಪಟ್ಟಿದ್ದಾರೆ. ಸದ್ಯ 55,72,820 ಸಕ್ರಿಯ ಪ್ರಕರಣಗಳು ಇವೆ. 

ಜಗತ್ತಿನಲ್ಲಿ ಅತಿಹೆಚ್ಚು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದೆ. ಇಲ್ಲಿ 41,06,225 ಮಂದಿಗೆ ಸೋಂಕು ತಗುಲಿದ್ದು, ಇದುವರೆಗೆ 1,45,324 ಮಂದಿ ಸಾವಿಗೀಡಾಗಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್‌ನಲ್ಲಿ 23,78,200 ಮಂದಿಗೆ ಸೋಂಕು ದೃಢಪಟ್ಟಿದ್ದು, 85,385 ಮಂದಿ ಮೃತಪಟ್ಟಿದ್ದಾರೆ. ಇತ್ತ ಮೂರನೇ ಸ್ಥಾನದಲ್ಲಿರುವ ಭಾರತದಲ್ಲಿ 12,88,108 ಮಂದಿ ಸೋಂಕು ತಗುಲಿದ್ದು,30,601 ಮಂದಿ ಸಾವಿಗೀಡಾಗಿದ್ದಾರೆ. 

ರಷ್ಯಾದಲ್ಲಿ 7,99,499, ದಕ್ಷಿಣ ಆಫ್ರಿಕಾದಲ್ಲಿ 4,21,996, ಪೆರುವಿನಲ್ಲಿ 3,75,961, ಚಿಲಿಯಲ್ಲಿ 3,41,304, ಇಂಗ್ಲೆಂಡ್‌ನಲ್ಲಿ 2,99,500, ಇರಾನ್‌ನಲ್ಲಿ 2,86,523, ಸ್ಪೇನ್‌ನಲ್ಲಿ 2,72,421 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ಕೋವಿಡ್‌ನಿಂದಾಗಿ ಇಂಗ್ಲೆಂಡ್‌ನಲ್ಲಿ 45,762, ಇಟಲಿಯಲ್ಲಿ 35,097, ಮೆಕ್ಸಿಕೊದಲ್ಲಿ 42,645, ಪ್ರಾನ್ಸ್‌ನಲ್ಲಿ 30,195, ಸ್ಪೇನ್‌ನಲ್ಲಿ 28,432, ಪೆರುವಿನಲ್ಲಿ 17,843, ರಷ್ಯಾದಲ್ಲಿ 13,026, ಮತ್ತು ಪಾಕಿಸ್ತಾನದಲ್ಲಿ 5,763 ಜನರು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ... ‘ಕೊವ್ಯಾಕ್ಸಿನ್ ಲಸಿಕೆ ಪ್ರಯೋಗ ಶುರು: ದೆಹಲಿಯ ವ್ಯಕ್ತಿಗೆ ಕೊವ್ಯಾಕ್ಸಿನ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು