ಬುಧವಾರ, ಆಗಸ್ಟ್ 4, 2021
21 °C

Covid-19 World Update | ವಿಶ್ವದಾದ್ಯಂತ 1.09 ಕೋಟಿಗೂ ಹೆಚ್ಚು ಜನರಿಗೆ ಕೊರೊನಾ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Coronavirus

ವಾಷಿಂಗ್ಟನ್: ವಿಶ್ವದಾದ್ಯಂತ ಶುಕ್ರವಾರ ಸಂಜೆ ವೇಳೆಗೆ ಸುಮಾರು 1.09 ಕೋಟಿ ಜನರಿಗೆ ಕೊರೊನಾ ಸೋಂಕು ತಗುಲಿದ್ದು 5.22 ಲಕ್ಷಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ.

ಡಿಸೆಂಬರ್‌ನಲ್ಲಿ ಚೀನಾದ ವುಹಾನ್‌ ನಗರದಲ್ಲಿ ಮೊದಲು ಕಾಣಿಸಿಕೊಂಡ ಸೋಂಕು ಈಗ 210ಕ್ಕೂ ಹೆಚ್ಚು ದೇಶಗಳಿಗೆ ಹರಡಿದೆ ಎಂದು ರಾಯಿಟರ್ಸ್ ಸುದ್ದಿವಾಹಿನಿ ವರದಿ ಮಾಡಿದೆ.

ಜಾನ್ಸ್‌ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಕೊರೊನಾ ವೈರಸ್ ರಿಸೋರ್ಸ್ ಸೆಂಟರ್ ಮಾಹಿತಿ ಪ್ರಕಾರ, ವಿಶ್ವದಾದ್ಯಂತ ಈವರೆಗೆ ಸೋಂಕಿನಿಂದಾಗಿ 522,385 ಜನ ಸಾವಿಗೀಡಾಗಿದ್ದಾರೆ. ಅಮೆರಿಕದಲ್ಲಿ 27.53 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು, 128,871 ಜನ ಮೃತಪಟ್ಟಿದ್ದಾರೆ.

ಪಾಕ್ ವಿದೇಶಾಂಗ ಸಚಿವರಿಗೆ ಕೋವಿಡ್: ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಶಿಗೆ ಕೋವಿಡ್ ಸೋಂಕು ತಗುಲಿದೆ. ಸದ್ಯ ಅವರು ಮನೆಯಲ್ಲೇ ಕ್ವಾರಂಟೈನ್‌ ಆಗಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ಸದ್ಯ ಪಾಕಿಸ್ತಾನದಲ್ಲಿ 221,896 ಮಂದಿ ಸೋಂಕಿತರಾಗಿದ್ದು, 4,551 ಜನ ಅಸುನೀಗಿದ್ದಾರೆ.

ಇದನ್ನೂ ಓದಿ: 

ಸರ್ಬಿಯಾ ರಾಜಧಾನಿಯಲ್ಲಿ ತುರ್ತು ಪರಿಸ್ಥಿತಿ: ಕೊರೊನಾ ವೈರಸ್‌ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಸರ್ಬಿಯಾ ರಾಜಧಾನಿ ಬೆಲ್‌ಗ್ರೇಡ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಸರ್ಬಿಯಾದಲ್ಲಿ ಒಂದೇ ದಿನ 359 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 15195ಕ್ಕೆ ಏರಿಕೆಯಾಗಿದೆ. ಈವರೆಗೆ 287 ಜನ ಸಾವಿಗೀಡಾಗಿದ್ದಾರೆ.

ಕೊರೊನಾ ಸಾವಿನ ಸಂಖ್ಯೆ ಶುಕ್ರವಾರ ರಾತ್ರಿ ವೇಳೆಗೆ ಬ್ರೆಜಿಲ್‌ನಲ್ಲಿ 61,884, ರಷ್ಯಾದಲ್ಲಿ 9,844, ಬ್ರಿಟನ್‌ನಲ್ಲಿ 44,216, ಸ್ಪೇನ್‌ನಲ್ಲಿ 28,385, ಇಟಲಿಯಲ್ಲಿ 34,833, ಮೆಕ್ಸಿಕೊದಲ್ಲಿ 29,189 ಹಾಗೂ ಇರಾನ್‌ನಲ್ಲಿ 11,260 ತಲುಪಿದೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು