ಭಾನುವಾರ, ಜೂಲೈ 5, 2020
22 °C

Covid-19 World Update | ಜಾಗತಿಕವಾಗಿ 98 ಲಕ್ಷ ಜನ ಸೋಂಕಿತರು, 4.95 ಲಕ್ಷ ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

coronavirus

ವಾಷಿಂಗ್ಟನ್: ಜಾನ್ಸ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾ ವೈರಸ್ ರಿಸೋರ್ಸ್ ಸೆಂಟರ್ ಮಾಹಿತಿ ಪ್ರಕಾರ ಜಾಗತಿಕವಾಗಿ 98 ಲಕ್ಷ ಜನರು ಸೋಂಕಿತರಾಗಿದ್ದು 4.95 ಲಕ್ಷ ಜನರು ಮೃತಪಟ್ಟಿದ್ದಾರೆ.

ಜಾಗತಿಕವಾಗಿ ಕೊರೊನಾ ವೈರಸ್‌ ಸೋಂಕು ಹೆಚ್ಚಾಗಿ ಹರಡುತ್ತಿದ್ದು ಅಮೆರಿಕದಲ್ಲಿ ಇಲ್ಲಿಯವರೆಗೂ 24 ಲಕ್ಷ ಜನರಿಗೆ ಸೋಂಕು ತಗುಲಿದ್ದು, 1.25 ಲಕ್ಷ ಜನರು ಮೃತಪಟ್ಟಿದ್ದಾರೆ. ಒಂದೇ ದಿನ 40,870 ಮಂದಿಯಲ್ಲಿ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿದೆ. ಸೋಂಕು ಮೊದಲು ಕಂಡುಬಂದ ಬಳಿಕ ದಿನವೊಂದರಲ್ಲಿ ದಾಖಲಾದ ಗರಿಷ್ಠ ಸಂಖ್ಯೆ ಇದಾಗಿದೆ ಎಂದು ರಾಯಿಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಫ್ಲೊರಿಡಾದಲ್ಲಿ ಒಂದೇ ದಿನ 8,942 ಪ್ರಕರಣಗಳು ಪತ್ತೆಯಾಗಿವೆ. ಜೂನ್ 24ರಂದು ಫ್ಲೊರಿಡಾದಲ್ಲಿ ಒಂದೇ ದಿನ 5,511 ಮಂದಿ ಸೋಂಕಿಗೀಡಾಗಿದ್ದರು. ಆ ಬಳಿಕ ದಿನವೊಂದರಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ.

ಇದನ್ನೂ ಓದಿ: 

ಬ್ರೆಜಿಲ್‌ನಲ್ಲಿ 12.74 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು 55,957 ಸಾವು, ರಷ್ಯಾದಲ್ಲಿ 6.19 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು 8,770 ಸಾವು ಸಂಭವಿಸಿದೆ. ಕೋವಿಡ್‌ನಿಂದಾಗಿ ಈವರೆಗೆ ಬ್ರಿಟನ್‌ನಲ್ಲಿ 43,498, ಪೆರುವಿನಲ್ಲಿ 8,939, ಚಿಲೆಯಲ್ಲಿ 5,068, ಸ್ಪೇನ್‌ನಲ್ಲಿ 28,338, ಇಟಲಿಯಲ್ಲಿ 34,708 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು