ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Update | ಒಂದೂವರೆ ಕೋಟಿ ದಾಟಿದ ಕೊರೊನಾ ಪೀಡಿತರ ಸಂಖ್ಯೆ

Last Updated 23 ಜುಲೈ 2020, 5:03 IST
ಅಕ್ಷರ ಗಾತ್ರ

ವಾಷಿಂಗ್ಟನ್: ಜಾಗತಿಕವಾಗಿ ಕೊರೊನಾ ಪೀಡಿತರ ಸಂಖ್ಯೆ ಒಂದೂವರೆ ಕೋಟಿ ದಾಟಿದ್ದು, ಸೋಂಕಿತರ ಸಂಖ್ಯೆ ಈ ತಿಂಗಳಾಂತ್ಯಕ್ಕೆ 2 ಕೋಟಿ ದಾಟುವ ಸಾಧ್ಯತೆಗಳಿವೆ.

ಜಾನ್ಸ್‌ ಹಾಪ್ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾ ವೈರಸ್ ರಿಸೋರ್ಸ್‌ ಸೆಂಟರ್ ಮಾಹಿತಿ ಪ್ರಕಾರ, ಜಗತ್ತಿನಾದ್ಯಂತ 1,52,26,993 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 6,23,374 ಮಂದಿ ಮೃತಪಟ್ಟಿದ್ದಾರೆ. ಈ ವರೆಗೆ 86,41,138 ಸೋಂಕಿತರು ಗುಣಮುಖರಾಗಿದ್ದಾರೆ.

ಜಗತ್ತಿನಲ್ಲಿ ಅತಿಹೆಚ್ಚು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕ ಮುಂದುವರೆದಿದೆ. ಇಲ್ಲಿ
39,70,901 ಸೋಂಕಿತರಿದ್ದು, ಈ ವರೆಗೆ 1,43,187 ಮಂದಿ ಸಾವಿಗೀಡಾಗಿದ್ದಾರೆ.

ಅಮೆರಿಕ ನಂತರ ಅತಿಹೆಚ್ಚು ಪ್ರಕರಣಗಳು ವರದಿಯಾದ ರಾಷ್ಟ್ರಗಳ ಸಾಲಿನಲ್ಲಿ ಬ್ರೆಜಿಲ್‌ ಇದ್ದು, ಮೂರನೇ ಸ್ಥಾನದಲ್ಲಿ ಭಾರತವಿದೆ. ಸೋಂಕಿತರು ಗುಣಮುಖರಾಗುತ್ತಿರು ದೇಶಗಳ ಪೈಕಿ ಬ್ರೆಜಿಲ್‌ ಮೊದಲ ಸ್ಥಾನದಲ್ಲಿದ್ದು ಅಮೆರಿಕ ಮತ್ತು ಭಾರತ ನಂತರದ ಸ್ಥಾನಗಳಲ್ಲಿವೆ.

ರಷ್ಯಾ, ಪೆರು, ದಕ್ಷಿಣ ಆಫ್ರಿಕಾ, ಚಿಲಿ, ಇಂಗ್ಲೆಂಡ್‌ ಸೇರಿದಂತೆ ಸ್ಪೇನ್‌ನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಈ ನಡುವೆ ಕೋವಿಡ್‌ಗೆ ಲಸಿಕೆ ಹಾಗೂ ಔಷಧಿ ತಯಾರಿಸುವ ಪ್ರಕ್ರಿಯೆಗೆ ವೇಗ ದೊರೆತಿದೆ. ಇದರಿಂದ ಜಾಗತಿಕವಾಗಿ ಜನರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT