ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀಜಿಂಗ್‌: ಒಂದೇ ದಿನ 101 ಕೊರೊನಾ ಪ್ರಕರಣ

ಎರಡನೇ ಸುತ್ತಿನಲ್ಲಿ ಸೋಂಕು ಹರಡುವ ಭೀತಿ
Last Updated 29 ಜುಲೈ 2020, 7:10 IST
ಅಕ್ಷರ ಗಾತ್ರ

ಬೀಜಿಂಗ್‌: ಚೀನಾದಲ್ಲಿ ಎರಡನೇ ಸುತ್ತಿನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳಲಾರಂಭಿಸಿದ್ದು, ಮೂರು ತಿಂಗಳಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ 101 ಪ್ರಕರಣಗಳು ಪತ್ತೆಯಾಗಿವೆ.

ಇಲ್ಲಿನ ರಾಷ್ಟ್ರೀಯ ಆರೋಗ್ಯ ಮಿಷನ್‌ ಬುಧವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ಬೀಜಿಂಗ್‌ನಲ್ಲಿ ಸ್ಥಳೀಯವಾಗಿ 98 ಪ್ರಕರಣಗಳು ಕಾಣಿಸಿಕೊಂಡಿವೆ. ಉಳಿದ ಮೂರು ಪ್ರಕರಣಗಳು ಹೊರ ಊರಿನಿಂದ ನಗರಕ್ಕೆ ಬಂದವರಲ್ಲಿ ಕಾಣಿಸಿಕೊಂಡಿವೆ.

98 ಸ್ಥಳೀಯ ಪ್ರಕರಣಗಳಲ್ಲಿ 89 ಪ್ರಕರಣಗಳು ಕ್ಸಿಂಜಿಯಾಂಗ್‌ ಪ್ರದೇಶದಿಂದ, ಎಂಟು ಪ್ರಕರಣಗಳು ಲಯೋನಿಂಗ್ ಪ್ರಾಂತ್ಯದಿಂದ ಮತ್ತು ಒಂದು ಬೀಜಿಂಗ್‌ನ ಮುನ್ಸಿಪಾಲಿಟಿ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಪತ್ರಿಕೆ ವರದಿ ಮಾಡಿದೆ. ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ.

ಚೀನಾದಲ್ಲಿ ಡಿಸೆಂಬರ್‌ ತಿಂಗಳಲ್ಲಿ ಮೊದಲ ಕೊರೊನಾ ಸೋಂಕಿನ ಪ್ರಕರಣ ದಾಖಲಾಗಿತ್ತು. ಇದಾದ ನಂತರ ಸೋಂಕಿನ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಾ ಸಾಗಿತ್ತು. ಕೆಲವು ತಿಂಗಳ ಹಿಂದೆ ಸೊಂಕಿನ ಪ್ರಮಾಣ ತಗ್ತುತ್ತಿದೆ ಎಂಬ ವರದಿಯಾದ ಬೆನ್ನಲ್ಲೇ, ಎರಡನೇ ಸುತ್ತಿನಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದು ಚೀನಿಯರಲ್ಲಿ ಆತಂಕ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT