ಶುಕ್ರವಾರ, ಜುಲೈ 30, 2021
27 °C

Covid-19 World update | ಅಮೆರಿಕದಲ್ಲಿ 28ಲಕ್ಷ ಜನರಿಗೆ ಸೋಂಕು; 1.29ಲಕ್ಷ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಅಮೆರಿಕದಲ್ಲಿ ಕೋವಿಡ್‌–19 ಸೋಂಕಿತರ ಸಂಖ್ಯೆ 28,09,108 ಜನರಿಗೆ ಸೋಂಕು ತಗುಲಿದ್ದು, ಇದರಲ್ಲಿ 1,29,478 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ಜಾನ್ಸ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾವೈರಸ್ ಸಂಶೋದನಾ ಕೇಂದ್ರ ಮಾಹಿತಿ ನೀಡಿದೆ.

ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ ಪ್ರತಿದಿನ ಹೆಚ್ಚುತ್ತಲೇ ಸಾಗಿದ್ದು, ಈ ವರೆಗೆ ಒಟ್ಟು 1,11,30,201 ಜನರಿಗೆ ಕೋವಿಡ್‌–19 ತಗುಲಿದೆ. ಸುಮಾರು 60.02 ಲಕ್ಷ ಸೋಂಕಿತರು ಗುಣಮುಖರಾಗಿದ್ದು, 5.26 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ.

ಅಮೆರಿಕ ಬಳಿಕ ಅತಿಹೆಚ್ಚು ಸೋಂಕು ಪ್ರಕರಣಗಳು ವರದಿಯಾದ ರಾಷ್ಟ್ರಗಳ ಸಾಲಿನಲ್ಲಿ ಬ್ರೆಜಿಲ್‌ ಇದೆ. ಈ ದೇಶದಲ್ಲಿ 15,39,081 ಪ್ರಕರಣಗಳು ಬೆಳಕಿಗೆ ಬಂದಿದ್ದು, 9,84,615 ಸೋಂಕಿತರು ಗುಣಮುಖರಾಗಿದ್ದಾರೆ. 61,884 ಜನರು ಸಾವಿಗೀಡಾಗಿದ್ದಾರೆ.

ರಷ್ಯಾದಲ್ಲಿ 6,73,654, ಭಾರತದಲ್ಲಿ 6,48,315, ಸ್ಪೇನ್‌ನಲ್ಲಿ 2,50,545, ಪೆರುವಿನಲ್ಲಿ 2,95,599, ಚಿಲಿಯಲ್ಲಿ 2,88,089 ಇಂಗ್ಲೆಂಡ್‌ನಲ್ಲಿ 2,85,788 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಪಾಕಿಸ್ತಾನದಲ್ಲಿ 2,25,283 ಮಂದಿಗೆ ಸೋಂಕು ತಗುಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು