ಶುಕ್ರವಾರ, ಆಗಸ್ಟ್ 7, 2020
28 °C

Covid-19 World update | 1.22 ಕೋಟಿ ಸೋಂಕಿತರು, 5.54 ಲಕ್ಷ ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಅಮೆರಿಕದಲ್ಲಿ 31,80,200 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇದರಲ್ಲಿ 1,35,211 ಮಂದಿ ಮೃತಪಟ್ಟಿದ್ದಾರೆ ಎಂದು ಜಾನ್ಸ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾ ವೈರಸ್ ಸಂಶೋದನಾ ಕೇಂದ್ರ ಮಾಹಿತಿ ನೀಡಿದೆ.

ಜಗತ್ತಿನಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಪ್ರತಿದಿನ ಹೆಚ್ಚುತ್ತಲೇ ಸಾಗಿದ್ದು, ಈ ವರೆಗೆ ಒಟ್ಟು 1,22,57,497 ಜನರಿಗೆ ಕೋವಿಡ್‌–19 ದೃಢಪಟ್ಟಿದೆ. 71,27,259 ಸೋಂಕಿತರು ಗುಣಮುಖರಾಗಿದ್ದು, 5,54,059 ಮಂದಿ ಸಾವಿಗೀಡಾಗಿದ್ದಾರೆ.

ಅಮೆರಿಕ ನಂತರ ಅತಿಹೆಚ್ಚು ಸೋಂಕು ಪ್ರಕರಣಗಳು ವರದಿಯಾದ ರಾಷ್ಟ್ರಗಳ ಸಾಲಿನಲ್ಲಿ ಬ್ರೆಜಿಲ್‌ ಇದೆ. ಈ ದೇಶದಲ್ಲಿ 17,19,660 ಪ್ರಕರಣಗಳು ಬೆಳಕಿಗೆ ಬಂದಿದ್ದು, 11,52,467ಸೋಂಕಿತರು ಗುಣಮುಖರಾಗಿದ್ದಾರೆ. 68,089 ಜನರು ಸಾವಿಗೀಡಾಗಿದ್ದಾರೆ.

ಭಾರತದಲ್ಲಿ 7,91,001, ರಷ್ಯಾದಲ್ಲಿ 7,07,301, ಪೆರುವಿನಲ್ಲಿ 3,12,911, ಚಿಲಿಯಲ್ಲಿ 3,06,216, ಸ್ಪೇನ್‌ನಲ್ಲಿ 2,99,593, ಇಂಗ್ಲೆಂಡ್‌ನಲ್ಲಿ 2,87,621 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಪಾಕಿಸ್ತಾನದಲ್ಲಿ 2,40,848 ಮಂದಿಗೆ ಸೋಂಕು ತಗುಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು