ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳೆದ 24 ಗಂಟೆಗಳಲ್ಲಿ ಅಮೆರಿಕದಾದ್ಯಂತ 67,632 ಹೊಸ ಕೊರೊನಾ ಸೋಂಕು ಪ್ರಕರಣ

Last Updated 16 ಜುಲೈ 2020, 4:45 IST
ಅಕ್ಷರ ಗಾತ್ರ

ವಾಷಿಂಗ್ಟನ್: ಕೊರೊನಾ ಸೋಂಕಿನ ಜಾಗತಿಕ ಕೇಂದ್ರಬಿಂದುವೆಂದೇ ಪರಿಗಣಿಸಲ್ಪಟ್ಟಿರುವ ಅಮೆರಿಕದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ವ್ಯಾಪಕವಾಗಿ ಏರುತ್ತಲೇ ಇದೆ. ಅಮೆರಿಕದ ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ.

ಜಾನ್ಸ್‌ ಹಾಪ್ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾ ವೈರಸ್ ರಿಸೋರ್ಸ್‌ ಸೆಂಟರ್ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 67,632 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ.

ಭಾರತೀಯರು ಅಧಿಕವಾಗಿ ವಾಸವಿರುವ ಟೆಕ್ಸಾಸ್‌ನಲ್ಲಿ ಒಂದೇ ದಿನಕ್ಕೆ (ಬುಧವಾರ) 10,791 ಹೊಸ ಪ್ರಕರಣಗಳು ವರದಿಯಾಗಿದ್ದು, 110 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಟೆಕ್ಸಾಸ್‌ ರಾಜ್ಯದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೊರೊನಾ ಸೋಂಕು ಇತರ ರಾಜ್ಯಗಳಲ್ಲಿಯೂ ವೇಗವಾಗಿ ಹರಡುತ್ತಿದ್ದು, ಪ್ರಮುಖವಾಗಿ ಫ್ಲೊರಿಡಾದಲ್ಲಿ ಈ ವರೆಗೆ ಒಟ್ಟು 3,02,000 ಪ್ರಕರಣಗಳು ದಾಖಲಾಗಿವೆ.

ಕ್ಯಾಲಿಫೋರ್ನಿಯಾದಲ್ಲಿ ಕಳೆದ 24 ಗಂಟೆಗಳಲ್ಲಿ 11,125 ಹೊಸ ಪ್ರಕರಣಗಳು ವರದಿಯಾಗಿದ್ದು, 140 ಮಂದಿ ಸಾವಿಗೀಡಾಗಿದ್ದಾರೆ. ಸೋಂಕಿನ ಹರಡುವಿಕೆ ತಡೆಗಟ್ಟಲು ರಾಜ್ಯವನ್ನು ಮತ್ತೆ ಲಾಕ್‌ಡೌನ್‌ ಮಾಡುವ ಬಗ್ಗೆ ಅಲ್ಲಿನ ಆಡಳಿತ ಚಿಂತನೆ ನಡೆಸಿದೆ.

ಲಾಸ್‌ ಎಂಜೆಲಿಸ್‌ನಲ್ಲಿ ಬುಧವಾರ 2,758 ಪ್ರಕರಣಗಳು ವರದಿಯಾಗಿದ್ದು, 44 ಮಂದಿ ಸಾವಿಗೀಡಾಗಿದ್ದಾರೆ. 'ನಾವು ಅಪಾಯಕಾರಿ ಹಂತದಲ್ಲಿದ್ದೇವೆ' ಎಂದು ಲಾಸ್‌ ಎಂಜೆಲಿಸ್‌ ಕೌಂಟಿಯ ಸಾರ್ವಜನಿಕ ಆರೋಗ್ಯ ನಿರ್ದೇಶಕಿ ಬಾರ್ಬರಾ ಫೆರ್ರೆರ್‌ ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ, ಮುಂದಿನ ತಿಂಗಳ ವೇಳೆಗೆ ಅಮೆರಿಕದಲ್ಲಿ ಕೊರೊನಾ ಸೋಂಕಿನಿಂದ ಸಾಯುವವರ ಸಂಖ್ಯೆ 1,50,000 ದಾಟಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT