ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಕ್‌ಟಾಕ್‌ ನಿಷೇಧ ಕುರಿತು ಶೀಘ್ರ ನಿರ್ಧಾರ: ಅಮೆರಿಕ

Last Updated 16 ಜುಲೈ 2020, 6:33 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಟಿಕ್‌ಟಾಕ್‌ ಸೇರಿದಂತೆ ಚೀನಾದ ವಿವಿಧ ಮೊಬೈಲ್‌ ಅಪ್ಲಿಕೇಷನ್‌ಗಳನ್ನು ನಿಷೇಧಿಸುವ ಬಗ್ಗೆಒಂದು ವಾರದೊಳಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಮೆರಿಕ ತಿಳಿಸಿದೆ.

‘ಟಿಕ್‌ಟಾಕ್‌ ನಿಷೇಧಕ್ಕಾಗಿ ಸ್ವಯಂ ಗಡುವು ನಿಗದಿಪಡಿಸಿಲ್ಲ. ಇದಕ್ಕಾಗಿ ತಿಂಗಳುಗಳ ಕಾಲ ಕಾಯುವುದಿಲ್ಲ. ಒಂದು ವಾರದೊಳಗೆ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ’ ಎಂದುಶ್ವೇತಭವನದ ಸಿಬ್ಬಂದಿ ಮುಖ್ಯಸ್ಥ ಮಾರ್ಕ್‌ ಮಿಡೋವ್ಸ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

‘ ಚೀನಾದ ಟಿಕ್‌ಟಾಕ್, ವಿಚ್ಯಾಟ್ ಸೇರಿದಂತೆ ಇತರ ಆ್ಯಪ್‌ಗಳಿಂದ ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುತ್ತಿದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಆ್ಯಪ್‌ಗಳ ಮೂಲಕ ಅಮೆರಿಕದ ನಾಗರಿಕರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎನ್ನುವ ದೂರುಗಳಿವೆ. ಈ ಎಲ್ಲ ವಿಷಯಗಳನ್ನು ಸಮಗ್ರವಾಗಿ ಅವಲೋಕನ ಮಾಡಿ ನಿಷೇಧದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ಟಿಕ್‌ಟಾಕ್‌, ವಿ–ಚಾಟ್ ಸೇರಿದಂತೆ ಇತರೆ ಆ್ಯಪ್‌ಗಳನ್ನು ಭಾರತ ನಿಷೇಧಿಸಿದ ಬಳಿಕ ಅಮೆರಿಕದಲ್ಲೂ ಈ ಆ್ಯಪ್‌ಗಳನ್ನು ನಿಷೇಧಿಸುವಂತೆ ಒತ್ತಡ ಹೇರಲಾಗುತ್ತಿದೆ. ಅಮೆರಿಕದಲ್ಲಿ ಸುಮಾರು 4 ಕೋಟಿ ಮಂದಿ ಟಿಕ್‌ಟಾಕ್‌ ಬಳಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT