ಮಂಗಳವಾರ, ಆಗಸ್ಟ್ 3, 2021
23 °C

ಇಂಡೋನೇಷ್ಯಾದಲ್ಲಿ ಪ್ರವಾಹ: 16 ಮಂದಿ ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಜಕಾರ್ತ: ಇಂಡೋನೇಷ್ಯಾದ ದಕ್ಷಿಣ ಸುಲವೇಸಿ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರವಾಹದಲ್ಲಿ 16 ಜನರು ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಕಾಣೆಯಾಗಿರುವ 23 ಮಂದಿಗಾಗಿ ಶೋಧ ಕಾರ್ಯಚರಣೆ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಹಲವೆಡೆ ಭೂ ಕುಸಿತ ಸಂಭವಿಸಿದೆ ಎಂದು ಅಲ್ಲಿನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯ ವಕ್ತಾರರು ತಿಳಿಸಿದರು.

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೂರು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದಾಗಿ ಆ ಪ್ರಾಂತ್ಯದಲ್ಲಿ ಪ್ರವಾಹ ಎದುರಾಗಿದೆ ಎಂದು ಉತ್ತರ ಲುವು ಜಿಲ್ಲೆಯ ಅಧಿಕಾರಿಯೊಬ್ಬರು ಹೇಳಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು