ಮಂಗಳವಾರ, ಆಗಸ್ಟ್ 3, 2021
24 °C

100 ಗಂಟೆಯಲ್ಲಿ 10ಲಕ್ಷ ಸೋಂಕಿತರು

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ಜಾಗತಿಕ ಮಟ್ಟದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1.40 ಕೋಟಿ ದಾಟಿದೆ. ಕಳೆದ 100 ಗಂಟೆಗಳಲ್ಲಿ ಹತ್ತು ಲಕ್ಷ ಮಂದಿಗೆ ಸೋಂಕು ಹರಡಿದೆ.

36 ಲಕ್ಷ ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಈಗಲೂ ಪ್ರತಿನಿತ್ಯ ಅತಿ ಹೆಚ್ಚು ಮಂದಿ ಸೋಂಕಿತರಾಗುತ್ತಿದ್ದಾರೆ. ಗುರುವಾರ ಒಂದೇ ದಿನ ಅಮೆರಿಕದಲ್ಲಿ 77,000 ಮಂದಿ ಹೊಸದಾಗಿ ಸೋಂಕಿಗೆ ಒಳಗಾಗಿದ್ದಾರೆ.

ಅನೇಕ ರಾಷ್ಟ್ರಗಳಲ್ಲಿ ಸೋಂಕು ಹರಡುವಿಕೆಯ ಪ್ರಮಾಣವು ಸ್ಥಿರತೆಗೆ ಬಂದಿದ್ದು, ಲಾಕ್‌ಡೌನ್‌ನಲ್ಲಿ ವಿನಾಯಿತಿಯನ್ನು ನೀಡಲಾಗುತ್ತಿದೆ. ಕೆಲವೆಡೆ ಸ್ಥಳೀಯ ಮಟ್ಟದ ಲಾಕ್‌ಡೌನ್‌ ಮಾತ್ರ ಜಾರಿ ಮಾಡಲಾಗುತ್ತಿದೆ.

ಏಳು ತಿಂಗಳ ಅವಧಿಯಲ್ಲಿ ಒಟ್ಟಾರೆ ಸುಮಾರು 5.90 ಲಕ್ಷ ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಬ್ರೆಜಿಲ್‌ನಲ್ಲಿ 20 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿತರಾಗಿದ್ದು, 76,000 ಮಂದಿ ಮೃತಪಟ್ಟಿದ್ದಾರೆ.

ಭಾರತದಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿತರಿದ್ದರೂ, ಪ್ರತಿನಿತ್ಯ ಹೊಸದಾಗಿ ಸೋಂಕಿಗೆ ಒಳಗಾಗುವವರ ಸಂಖ್ಯೆ 30 ಸಾವಿರದ ಆಸುಪಾಸಿನಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು