ಭಾನುವಾರ, ಸೆಪ್ಟೆಂಬರ್ 26, 2021
21 °C

ಭಾರತ ಅಮೆರಿಕ ಬಾಂಧವ್ಯ ವೃದ್ಧಿಗೆ ಆದ್ಯತೆ: ಜೋ ಬಿಡೆನ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್: ‘ಅಧ್ಯಕ್ಷ ಸ್ಥಾನಕ್ಕೆ ನವೆಂಬರ್‌ನಲ್ಲಿ ನಡೆಯುವ ಚುನಾವಣೆಯಲ್ಲಿ ನಾನು ಗೆದ್ದರೆ, ಆಡಳಿತದಲ್ಲಿ ಭಾರತದ ಜೊತೆಗಿನ ಬಾಂಧವ್ಯ ವೃದ್ಧಿಗೆ ಆದ್ಯತೆ ನೀಡುತ್ತೇನೆ’ ಎಂದು ಡೆಮಾಕ್ರಟಿಕ್‍ ಪಕ್ಷದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ, ಮಾಜಿ ಉಪಾಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ.

ಪರಸ್ಪರರ ಸುರಕ್ಷತೆ ದೃಷ್ಟಿಯಿಂದ ಉಭಯ ರಾಷ್ಟ್ರಗಳ ನಡುವೆ ಪಾಲುದಾರಿಕೆಯ ಅಗತ್ಯವಿದೆ ಎಂದು ನಿಧಿ ಸಂಗ್ರಹ ಕಾರ್ಯಕ್ರಮವೊಂದರಲ್ಲಿ ಅವರು ಭಾರತ– ಅಮೆರಿಕ ಬಾಂಧವ್ಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಬೀಕನ್ ಕ್ಯಾಪಿಟಲ್ ಸಂಸ್ಥೆಯ ಸಿಇಒ ಮತ್ತು ಅಧ್ಯಕ್ಷರಾದ ಅಲನ್ ಲೆವೆನ್‌ತಲ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಿಡನ್ ಅವರು, ಭಾರತ ಮತ್ತು ಅಮೆರಿಕ ‘ಸಹಜ ಪಾಲುದಾರ’ ದೇಶಗಳು ಎಂದು ಪ್ರತಿಪಾದಿಸಿದರು.

ಆದರೆ, ನಿರ್ದಿಷ್ಟ ಕಾರ್ಯತಂತ್ರ ಉದ್ದೇಶದ ಪಾಲುದಾರಿಕೆ ಅಗತ್ಯವಾಗಿದೆ ಎಂದು ಅಮೆರಿಕದ ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಭಾರತ ನಿರ್ಣಾಯಕ ಪಾತ್ರ ವಹಿಸಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಉಪಾಧ್ಯಕ್ಷರಾಗಿ ತಮ್ಮ ಎಂಟು ವರ್ಷಗಳ ಆಡಳಿತವನ್ನು ಉಲ್ಲೇಖಿಸಿದ ಅವರು, ಈ ಅವಧಿಯಲ್ಲಿ ಭಾರತ ಮತ್ತು ಅಮೆರಿಕ ನಡುವಣ ನಾಗರಿಕ ಪರಮಾಣು ಒಪ್ಪಂದ ಜಾರಿಗೆ ಪ್ರಮುಖ ಪಾತ್ರ ವಹಿಸಿದ್ದೆ ಎಂದು ಸ್ಮರಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು