ಮಂಗಳವಾರ, ಸೆಪ್ಟೆಂಬರ್ 21, 2021
23 °C
ವಿಶ್ವಸಂಸ್ಥೆಯಿಂದ ವರದಿ ಬಿಡುಗಡೆ

ಭಾರತ: ಐದು ದಶಕದಲ್ಲಿ 4.58 ಕೋಟಿ ಮಹಿಳೆಯರು ನಾಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ಕಳೆದ ಐವತ್ತು ವರ್ಷಗಳ ಅವಧಿಯಲ್ಲಿ ಭಾರತದಲ್ಲಿ 4.58 ಕೋಟಿ ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿ (ಯುಎನ್‌ಎಫ್‌ಪಿಎ) ಮಂಗಳವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ಹೇಳಲಾಗಿದೆ.

ಈ ಅವಧಿಯಲ್ಲಿ ಜಗತ್ತಿನಲ್ಲಿ ಒಟ್ಟು 14.26 ಕೋಟಿ ಮಹಿಳೆಯರು ನಾಪತ್ತೆಯಾಗಿದ್ದಾರೆ. ಚೀನಾದಲ್ಲಿ ಗರಿಷ್ಠ ಸಂಖ್ಯೆಯ 7.23 ಕೋಟಿ ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದೂ ವರದಿಯಲ್ಲಿ ವಿವರಿಸಲಾಗಿದೆ. 

ಜನನಪೂರ್ವ ಮಗುವಿನ ಲಿಂಗ ಪತ್ತೆ ಮಾಡಿ, ಹೆಣ್ಣು ಭ್ರೂಣವಾಗಿದ್ದರೆ ಹತ್ಯೆ ಮಾಡುವುದು. ಇಲ್ಲವೇ ಜನಿಸಿದ ನಂತರ ಹೆಣ್ಣು ಮಗುವಿನ ಹತ್ಯೆಯಾದರೆ ಅದನ್ನು ‘ಕಾಣೆಯಾದ ಮಹಿಳೆ’ ಎಂದು ಪರಿಗಣಿಸಲಾಗುತ್ತದೆ ಎಂದು  ಯುಎನ್‌ಎಫ್‌ಪಿಎ ವರದಿ ತಿಳಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು