ಶುಕ್ರವಾರ, ಸೆಪ್ಟೆಂಬರ್ 17, 2021
31 °C

ಚೀನಾ ಉತ್ಪನ್ನ ಬಹಿಷ್ಕಾರಕ್ಕೆ ಒತ್ತಾಯಿಸಿ ಅಮೆರಿಕದಲ್ಲಿ ಭಾರತೀಯರ ಪ್ರತಿಭಟನೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್‌: ಅಮೆರಿಕದಲ್ಲಿ ನೆಲೆಸಿರುವ ಭಾರತ, ಟಿಬೆಟ್‌ ಮತ್ತು ತೈವಾನ್‌ ನಾಗರಿಕರು ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನಲ್ಲಿ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. 

ಲಡಾಖ್‌ನ ಗಾಲ್ವಾನ್‌ ಕಣಿವೆಯಲ್ಲಿ ಕಳೆದ ತಿಂಗಳು ಚೀನಾ ಭದ್ರತಾ ಪಡೆಗಳು ದಾಳಿ ನಡೆಸಿದ ಪರಿಣಾಮ ಭಾರತದ 20 ಸೈನಿಕರು ಪ್ರಾಣತ್ಯಾಗ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಚೀನಾ ಉತ್ಪನ್ನಗಳನ್ನು ಅಮೆರಿಕದಲ್ಲಿ ಬಹಿಷ್ಕರಿಸುವಂತೆ ಒತ್ತಾಯಿಸಿ ನ್ಯೂಯಾರ್ಕ್‌ನ ಪ್ರತಿಷ್ಠಿತ ಟೈಮ್ಸ್‌ ಸ್ಕ್ವೇರ್‌ನಲ್ಲಿ ಭಾರತ, ಟಿಬೆಟ್‌ ಮತ್ತು ತೈವಾನ್‌ ನಾಗರಿಕರು ಬಿತ್ತಿ ಪತ್ರ ಹಿಡಿದು, ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.   

ಉತ್ಪನ್ನಗಳನ್ನು ಬಹಿಷ್ಕರಿಸುವ ಮೂಲಕ ಚೀನಾ ಜೊತೆಗಿನ ವ್ಯಾಪಾರವನ್ನು ಕೊನೆಗೊಳಿಸಬೇಕು, ಟಿಬೆಟ್‌ನ ಸ್ವಾತಂತ್ರ್ಯ ಹೋರಾಟದ ಜೊತೆ ನಿಲ್ಲಬೇಕು ಮತ್ತು ತೈವಾನ್‌ಗೆ ಬೆಂಬಲ ನೀಡಬೇಕೆಂದು ಪ್ರತಿಭಟನಾಕಾರರು ಅಮೆರಿಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು