ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ಆನ್‌ಲೈನ್‌ ಶಿಕ್ಷಣಕ್ಕೆ ವಿರೋಧ: ಭಾರತ ಮೂಲದ ವಿದ್ಯಾರ್ಥಿಗಳಿಗೆ ಆತಂಕ

Last Updated 12 ಜುಲೈ 2020, 10:29 IST
ಅಕ್ಷರ ಗಾತ್ರ

ನವದೆಹಲಿ: ಕ್ಯಾಂಪಸ್‌ನಲ್ಲೇ ಬೋಧನೆ ಆರಂಭಿಸುವ ಬದಲು ವಿಶ್ವವಿದ್ಯಾಲಯಗಳು ಆನ್‌ಲೈನ್‌ ತರಗತಿಗಳನ್ನು ಮುಂದುವರಿಸಿದರೆ ಅಲ್ಲಿ ಕಲಿಯುತ್ತಿರುವ ವಿದೇಶಿ ವಿದ್ಯಾರ್ಥಿಗಳು ತಮ್ಮ ದೇಶಕ್ಕೆ ಮರಳಬೇಕಾಗುತ್ತದೆ ಅಥವಾ ಗಡಿಪಾರಾಗಬೇಕಾಗುತ್ತದೆ ಎಂದು ಅಮೆರಿಕದ ವಲಸೆ ಪ್ರಾಧಿಕಾರ ಹೇಳಿದೆ. ಇದರಿಂದಾಗಿ ಅಮೆರಿಕದಲ್ಲಿ ಶಿಕ್ಷಣ ಪಡೆಯುತ್ತಿರುವ ಭಾರತದ ಸಾವಿರಾರು ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ.

‘ಅಮೆರಿಕವು ಒಂದುವೇಳೆ ಇಂಥ ಕ್ರಮ ಕೈಗೊಂಡರೆ ನಾವು ಮಧ್ಯದಲ್ಲೇ ಶಿಕ್ಷಣವನ್ನು ಕೊನೆಗೊಳಿಸಿ ಸ್ವದೇಶಕ್ಕೆ ಮರಳಬೇಕಾಗುತ್ತದೆ, ಮತ್ತೆ ವಿಶ್ವವಿದ್ಯಾಲಯಕ್ಕೆ ಬರಲು ಅವಕಾಶ ಲಭಿಸುವುದೇ ಎಂಬ ಖಚಿತತೆ ಇಲ್ಲ. ನಾವು ಪಡೆದ ಶಿಕ್ಷಣ ಸಾಲವನ್ನು ತುಂಬುವುದು ಹೇಗೆ? ನಮ್ಮ ಉದ್ಯೋಗದ ಗತಿ ಏನು’ ಎಂದೆಲ್ಲ ಅಲ್ಲಿ ಶಿಕ್ಷಣ ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.

ವಲಸೆ ಪ್ರಾಧಿಕಾರ ಹೊರಡಿಸಿರುವ ಈ ಆದೇಶವನ್ನು ರದ್ದುಪಡಿಸುವಂತೆ ಒತ್ತಾಯಿಸಿ ಹಾರ್ವರ್ಡ್‌ ಯುನಿವರ್ಸಿಟಿ, ಮಸಾಚುಸೆಟ್ಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಜಾನ್ಸ್‌ ಹಾಪ್ಕಿನ್ಸ್‌ ಯುನಿವರ್ಸಿಟಿ ಮುಂತಾದವು ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿವೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್‌ ಶೃಂಗ್ಲಾ ಅವರೂ ಅಮೆರಿಕದ ಅಧಿಕಾರಿಗಳ ಜತೆಗೆ ಆನ್‌ಲೈನ್‌ ಸಭೆ ನಡೆಸಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ಈವರೆಗೂ ಯಾವುದೇ ತೀರ್ಮಾನಗಳು ಆಗದಿರುವುದು ವಿದ್ಯಾರ್ಥಿಗಳ ಆತಂಕ ಹೆಚ್ಚುವಂತೆ ಮಾಡಿದೆ.

ಇತ್ತೀಚಿನ ವರದಿಯ ಪ್ರಕಾರ ಅಮೆರಿಕದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ 1,94,556 ಮಂದಿ ಭಾರತೀಯ ಮೂಲದ ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದಾರೆ. ಕೊರೊನಾ ಕಾರಣದಿಂದಾಗಿ ಅಮೆರಿಕದ ವಿಶ್ವವಿದ್ಯಾಲಯಗಳು ಮಾರ್ಚ್‌ ತಿಂಗಳಿಂದ ಕ್ಯಾಂಪಸ್‌ ಅನ್ನು ಮುಚ್ಚಿ, ಆನ್‌ಲೈನ್‌ ತರಗತಿಗಳನ್ನು ಆರಂಭಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT