ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಮೋದಿ ಲಡಾಖ್ ಭೇಟಿ, ಪರಿಸ್ಥಿತಿ ಉಲ್ಭಣಗೊಳಿಸದಂತೆ ಚೀನಾ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀಜಿಂಗ್ ( ಚೀನಾ): ಎರಡೂ ರಾಷ್ಟ್ರಗಳ ನಡುವೆ ಸೇನೆ ಹಾಗೂ ರಾಜತಾಂತ್ರಿಕ ಮಾರ್ಗಗಳ ಮೂಲಕ ಮಾತುಕತೆ ನಡೆಯುತ್ತಿರುವ ಇಂತಹ ಸಮಯದಲ್ಲಿ ಯಾವುದೇ ರಾಷ್ಟ್ರವು ಪರಿಸ್ಥಿತಿಯನ್ನು ಉಲ್ಭಣಗೊಳಿಸುವ ಯಾವುದೇ ಕೆಲಸಕ್ಕೆ ಮುಂದಾಗಬಾರದು ಎಂದು ಚೀನಾ ಎಚ್ಚರಿಕೆ ನೀಡಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಲಡಾಖ್ ಭೇಟಿ ಸಮಯದಲ್ಲಿ ಚೀನಾ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಜೋ ಲಿಜಿಯಾನ್ ಈ ಹೇಳಿಕೆ ನೀಡಿದ್ದು, ಭಾರತಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದಂತಾಗಿದೆ. ಭಾರತ ಹಾಗೂ ಚೀನಾ ಗಡಿಯ ಕುರಿತು ಎರಡೂ ರಾಷ್ಟ್ರಗಳ ಸೇನೆ ನಡುವೆ ಹೊಡೆದಾಟ, ಹಲ್ಲೆಯಂತಹ ಕೃತ್ಯಗಳು ನಡೆಯುತ್ತಿವೆ. ಇದೇ ಕಾರಣಕ್ಕಾಗಿ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಲು ಕಾರಣವಾಗಿದೆ.

ಈ ವಿಷಯ ಕುರಿತಂತೆ ಎರಡೂ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಮಾರ್ಗಗಳ ಮೂಲಕ ಬಿಸಿಯ ವಾತಾವರಣವನ್ನು ತಣ್ಣಗಾಗಿಸುವ ಬಗ್ಗೆ ಸಂವಹನ ಮತ್ತು ಮಾತುಕತೆ ನಡೆಸುತ್ತಿವೆ ಎಂದಿರುವ ಲಿಜಿಯಾನ್, ಈ ನಡುವೆ ಯಾವುದೇ ಕಡೆಯವರು ಉದ್ವಿಗ್ನ ಪರಿಸ್ಥಿತಿ ಉಲ್ಬಣಿಸುವ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಹೇಳಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು