ಬುಧವಾರ, ಜುಲೈ 28, 2021
29 °C

ಹಾಂಕಾಂಗ್‌ನಲ್ಲಿ ಪ್ರಜಾಪ್ರಭುತ್ವ ಪರ ಚುನಾವಣೆ

ಎಪಿ Updated:

ಅಕ್ಷರ ಗಾತ್ರ : | |

Prajavani

ಹಾಂಗ್‌ಕಾಂಗ್‌: ಇಲ್ಲಿನ ಪ್ರಜಾಪ್ರಭುತ್ವದ ಪರ ಹೋರಾಟಗಾರರು ಅನೌಪಚಾರಿಕವಾಗಿ ಆಯೋಜಿಸಿದ್ದ ಎರಡು ದಿನಗಳ ವಾರಾಂತ್ಯದ ಪ್ರಾಥಮಿಕ ಚುನಾವಣೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ನಾಗರಿಕರು ಮತದಾನ ಮಾಡಿದ್ದಾರೆ. ಮುಂಬರುವ ಚುನಾವಣೆಗಾಗಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆಮಾಡುವ ಉದ್ದೇಶದಿಂದ ಈ ಚುನಾವಣೆ ನಡೆಸಲಾಗಿದೆ.

ಹಾಂಗ್‌ಕಾಂಗ್‌ನಲ್ಲಿ ಎರಡು ವಾರಗಳ ಹಿಂದೆ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಚೀನಾ ಜಾರಿ ಮಾಡಿದೆ. ಅದರ ಹೊರತಾಗಿಯೂ ಈ ವಾರಾಂತ್ಯದಲ್ಲಿ ನಡೆಸಿದ ಚುನಾವಣೆಯಲ್ಲಿ ಜನರು ಬಿರುಬಿಸಿಲನ್ನು ಲೆಕ್ಕಿಸದೆ ಸಾಲುಗಟ್ಟಿನಿಂತು ಮತದಾನ ಮಾಡಿದ್ದಾರೆ.

‘ಈ ಚುನಾವಣೆಗಳು ಸ್ಥಳೀಯ ಸರ್ಕಾರದಲ್ಲಿ ಹಸ್ತಕ್ಷೇಪ ನಡೆಸುವ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸುವಂಥವುಗಳಾಗಿದ್ದು, ಕಾನೂನು ವಿರೋಧಿಯಾಗಿವೆ’ ಎಂದು ಹಾಂಗ್‌ಕಾಂಗ್‌ನ ಸಂವಿಧಾನ ವ್ಯವಹಾರಗಳ ಸಚಿವ ಎರಿಕ್‌ ತ್ಸಾಂಗ್‌ ಎಚ್ಚರಿಕೆ ನೀಡಿದ್ದರು. ಆದರೆ ‘ಶಾಸನ ಸಭೆಯಲ್ಲಿ ಬಹುಮತ ಪಡೆಯುವ ಮೂಲಕ ಸರ್ಕಾರವನ್ನು ಹೊಣೆಗಾರರನ್ನಾಗಿಸುವುದು ನಮ್ಮ ಉದ್ದೇಶ’ ಎಂದು ಪ್ರಜಾಪ್ರಭುತ್ವ ಪರ ವಾದಿಗಳು ಹೇಳಿದ್ದರು.

ಹಾಂಗ್‌ಕಾಂಗ್‌ನ ಈಗಿನ ಆಡಳಿತವು ಚೀನಾದ ಪರ ವಾಲಿದೆ. ಪ್ರಜಾತಂತ್ರ ವ್ಯವಸ್ಥೆಯನ್ನು ಉಳಿಸಬೇಕಾದರೆ ಮುಂಬರುವ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಅಗತ್ಯ. ಅದಕ್ಕೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಈ ಚುನಾವಣೆ ನಡೆಸಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು