ಭಾನುವಾರ, ಆಗಸ್ಟ್ 9, 2020
21 °C

ದಕ್ಷಿಣ ಆಫ್ರಿಕಾದಲ್ಲಿ ಲಸಿಕೆ ತಯಾರಿಗೆ ತೊಡಕಾಗಿವೆ ಲಕ್ಷಣ ರಹಿತ ಸೋಂಕು ಪ್ರಕರಣಗಳು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೋಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ಸೋಂಕು ದೃಢಪಟ್ಟ ಶೇ 50 ರಿಂದ ಶೇ 60 ವಯಸ್ಕರಲ್ಲಿ ಸೋಂಕಿನ ಯಾವುದೇ ಲಕ್ಷಣಗಳಿರಲಿಲ್ಲ ಎಂದು ಅಲ್ಲಿನ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದರು. 

ದಕ್ಷಿಣ ಆಫ್ರಿಕಾದಲ್ಲಿ  ಹೆಚ್ಚಿನ ಸೋಂಕಿತರಲ್ಲಿ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಹಾಗಾಗಿ ಹಲವು ಪ್ರಕರಣಗಳು ಗಮನಕ್ಕೆ ಬರುತ್ತಿಲ್ಲ ಎಂದು ದಕ್ಷಿಣ ಆಫ್ರಿಕಾದ ಅಂತರರಾಷ್ಟ್ರೀಯ ಲಸಿಕೆ ಪ್ರಯೋಗ ತಂಡದ ಮುಖ್ಯಸ್ಥ ಡಾ.ಶಬೀರ್‌ ಮಾಧಿ ಅವರು ಹೇಳಿದರು. 

‘ಲಕ್ಷಣ ರಹಿತ ಪ್ರಕರಣಗಳಿಂದಾಗಿ ಲಸಿಕೆ ಸಿದ್ಧಪಡಿಸಲು ಇನ್ನಷ್ಟು ಕಷ್ಟಕರವಾಗುತ್ತಿದೆ. ಶೇ 80ರಷ್ಟು ಸೋಂಕಿತ ಮಕ್ಕಳಲ್ಲಿ ಯಾವುದೇ ಲಕ್ಷಣಗಳೇ ಇರಲಿಲ್ಲ. ವೈದ್ಯಕೀಯ ಪ್ರಯೋಗಗಳಿಗೆ ಸೋಂಕು ರಹಿತ ಜನರ ಅವಶ್ಯಕತೆ ಇದೆ. ಆದರೆ ಇಲ್ಲಿ ಹೆಚ್ಚಿನ ಪ್ರಕರಣಗಳು ಲಕ್ಷಣರಹಿತವಾಗಿವೆ. ಹೀಗಿರುವಾಗ ಲಸಿಕೆಯ ಪ್ರಯೋಗ ನಡೆಸುವುದು ಕಷ್ಟಕರ ಎಂದು ಅವರು ಸಿಎನ್‌ಬಿಸಿಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

ಈವರೆಗೆ ದಕ್ಷಿಣ ಆಫ್ರಿಕಾದಲ್ಲಿ 2.50 ಲಕ್ಷ ಜನರಿಗೆ ಸೋಂಕು ತಗುಲಿದ್ದು,  3,860 ಜನರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು