ಮಂಗಳವಾರ, ಆಗಸ್ಟ್ 3, 2021
26 °C
ಚುನಾಯಿತ ಪ್ರತಿನಿಧಿಗಳ ಆಸ್ತಿ ಮತ್ತು ರಾಷ್ಟ್ರೀಯತೆ ಬಹಿರಂಗಪಡಿಸಲು ಆಗ್ರಹಿಸಿದ ವಿರೋಧ ಪಕ್ಷ

ಪಾಕಿಸ್ತಾನ‌: ಇಮ್ರಾನ್ ಖಾನ್ ಸಂಪುಟದಲ್ಲಿ ರಾಷ್ಟ್ರೀಯತೆ ವಿವಾದ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಸಚಿವ ಸಂಪುಟದಲ್ಲಿ ಕನಿಷ್ಠ ಏಳು ಸಚಿವರು ದ್ವಿಪೌರತ್ವ ಇಲ್ಲವೇ ಇತರ ರಾಷ್ಟ್ರದ ಶಾಶ್ವತ ನಿವಾಸಿಗಳಾಗಿದ್ದಾರೆ ಎನ್ನುವ ವಿಷಯ ಬಹಿರಂಗವಾಗಿದೆ.

ಚುನಾಯಿತ ಸದಸ್ಯರ ಆಸ್ತಿ ಮತ್ತು ರಾಷ್ಟ್ರೀಯತೆಯನ್ನು ಬಹಿರಂಗಪಡಿಸಬೇಕೆಂದು ವಿರೋಧ ಪಕ್ಷಗಳು ಆಗ್ರಹಪಡಿಸಿದ್ದವು. ಈ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರವು ತನ್ನ ಏಳು ಸಚಿವರ ಮಾಹಿತಿಯನ್ನು ಬಹಿರಂಗಪಡಿಸಿದೆ.

ಚುನಾಯಿತ ಸದಸ್ಯರ ಆಸ್ತಿ ಮತ್ತು ರಾಷ್ಟ್ರೀಯತೆಯ ವಿವರಗಳನ್ನು ಸರ್ಕಾರವು ಕ್ಯಾಬಿನೆಟ್ ವಿಭಾಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಪ್ರಧಾನಿ ಖಾನ್ ಅವರ ಸೂಚನೆಯ ಮೇರೆಗೆ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ ಎಂದು ಮಾಹಿತಿ ಸಚಿವ ಶಿಬ್ಲಿ ಫರಾಜ್ ಅವರು ಟ್ವೀಟ್ ಮಾಡಿದ್ದಾರೆ.

ಇಮ್ರಾನ್ ಖಾನ್ ಪ್ರತಿಪಕ್ಷದಲ್ಲಿದ್ದಾಗ, ಸಾರ್ವಜನಿಕ ಕಚೇರಿಗಳಲ್ಲಿ ವಿದೇಶಿ ಪ್ರಜೆಗಳಿದ್ದಾರೆ ಎಂದು ಆರೋಪಿಸಿದ್ದರು. ‍ಪಾಕಿಸ್ತಾನದಲ್ಲಿ ವಿದೇಶಿ ಪ್ರಜೆಗಳು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು